ನೂತನ ಪಿಂಚಣಿ ಯೋಜನೆ ರದ್ದುಪಡಿಸಲು ಒತ್ತಾಯ

6
Published on


ಮೈಸೂರು: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.


ಟೌನ್ ಹಾಲ್ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ನೂತನ ಪಿಂಚಣಿ ಪದ್ಧತಿ ಅವೈಜ್ಞಾನಿಕವಾಗಿದೆ. ಹಾಗಾಗಿ ಇದನ್ನು ಶೀಘ್ರವೇ ರದ್ದುಗೊಳಿಸಿ ಈ ಹಿಂದಿನಂತೆ ಹಳೆಯ ಪಿಂಚಣಿಯನ್ನು ಜಾರಿಗೆ ತರುವಂತೆ ಆಗ್ರಹಿಸಿದರು. ನೂತನ ಪಿಂಚಣಿ ಯೋಜನೆಯಲ್ಲಿ ಹಲವು ನ್ಯೂನತೆಗಳಿವೆ. ಈ ಪದ್ಧತಿಯಿಂದ 2006ರ ನಂತರ ನೇಮಕಗೊಂಡ ಲಕ್ಷಾಂತರ ನೌಕರರು ಸಾಮಾಜಿಕ ಅನ್ಯಾಯಕ್ಕೆ ಒಳಗಾಗುವಂತಾಗಿದೆ. ಇದು ಅನಿಶ್ಚಿತ ಪಿಂಚಣಿ ಯೋಜನೆಯಾಗಿದ್ದು, ನೂತನ ಪಿಂಚಣಿ ಪದ್ಧತಿಗೆ ಒಳಪಡುವ ಸರ್ಕಾರಿ ನೌಕರರು ಸೇವಾ ನಿವೃತ್ತಿ ಸಂದರ್ಭದಲ್ಲಿ ಪಿಂಚಣಿ ಮತ್ತು ಇನ್ನಿತರ ಸವಲತ್ತುಗಳಿಂದ ವಂಚಿತರಾಗುವಂತಾಗಿದೆ ಎಂದು ದೂರಿದರು.
ನಿವೃತ್ತ ಪ್ರಾಧ್ಯಾಪಕ ಪ್ರೊ.ಶಿವರಾಜಪ್ಪ, ವೇದಿಕೆಯ ಅಧ್ಯಕ್ಷ ಆರ್.ವಾಸುದೇವ, ಉಪಾಧ್ಯಕ್ಷ ಭಾಸ್ಕರ್, ಕಾರ್ಯದರ್ಶಿ ಎಸ್.ವಿನೋದ್, ಖಜಾಂಚಿ ಗಣೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net