ದೇಶದಿಂದ ಗಡಿಪಾರು ಮಾಡಲು ಪಟ್ಟು

HYR hindu 13
Published on

ಹಿರಿಯೂರು: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್-ಬಜರಂಗದಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಸ್ಟಾಲಿನ್ ವಿರುದ್ಧ ಘೋಷಣೆ ಕೂಗಿದರು.

ಸನಾತನ ಹಿಂದು ಧರ್ಮ ನಿರ್ಮೂಲನೆ ಮಾಡಬೇಕು ಎಂದು ಹೇಳುವ ಮೂಲಕ ಹಿಂದುಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದು, ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂಮದು ಆಗ್ರಹಿಸಿದರು.

ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಮಸ್ಕಲ್ ಶ್ರೀನಿವಾಸ್, ತಾಲೂಕು ಕಾರ್ಯದರ್ಶಿ ವೆಂಟೇಶ್, ಆರ್.ಟಿ.ಪ್ರಶಾಂತ್, ಗೋವರ್ಧನ್, ಗೋವಿಂದಚಾರ್, ವಿಶ್ವನಾಥ್, ಸತೀಶ್, ಧನುಷ್, ರಾಜೇಂದ್ರ ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net