

ಹಿರೇಕೆರೂರ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ತಾಲೂಕು ಘಟಕದಿಂದ ಗುರುವಾರ ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಿಂದ ತಹಸೀಲ್ದಾರ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಸಂಚಾಲಕ ಬಸವರಾಜ ಎಚ್.ವಿ. ಮಾತನಾಡಿ, ಕೇಂದ್ರ ಸರ್ಕಾರ ಎಲ್ಲ ಪ್ರಾದೇಶಿಕ ಭಾಷೆಗಳ ಹಿತದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯನ್ನು ರೂಫಿಸಿದೆ. ದೇಶದಲ್ಲೇ ಈ ನೀತಿಯನ್ನು ಜಾರಿಮಾಡುವ ಮೊದಲ ರಾಜ್ಯ ನಮ್ಮದಾಗಲಿದೆ. ರಾಜ್ಯ ಸರ್ಕಾರವು ಯಾವುದೇ ರಾಜಕೀಯ ಪ್ರೇರಣೆಗೆ ಒಳಗಾಗದೆ, ಶಿಕ್ಷಣವನ್ನು ರಾಜಕೀಯ ಸ್ವಾರ್ಥ ಸಾಧನೆಯ ಬಳಸಿಕೊಳ್ಳದೆ ಎನ್ಇಪಿಯನ್ನು ಜಾರಿಗೆ ತರಬೇಕು ಎಂದರು.
ಶಿರಸ್ತೇದಾರ ಜಡ್.ಎ. ಹೊಸಳ್ಳಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರವೀಣ ಕೆ.ಎಂ., ಮನು ಎನ್.ಕೆ., ಹಾಗೂ ವಿವಿಶ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.