ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

Forced to meet various demands
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಲ್ಲಿಕಾರ್ಜುನ ಎಚ್​.ಟಿ., ಕಾಶಿಬಾಯಿ ಜನಗುಂಡ, ಮಹಾದೇವಿ ಧರ್ಮಶೆಟ್ಟಿ ಮತ್ತಿತರರಿದ್ದರು.
Published on

ವಿಜಯಪುರ: ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ವಸತಿ ನಿಲಯಗಳಲ್ಲಿ "ಡಿ' ಗ್ರೂಪ್​ ಹೊರಗುತ್ತಿಗೆ ಕಾರ್ಮಿಕರ ಬಾಕಿ ವೇತನ, ವೇತನದ ರಿಸೀದಿ, ಪಿಎಫ್​ ಮತ್ತು ಇಎಸ್​ಐ ಕಡಿತದ ಮಾಹಿತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ನೀಡುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂ (ಎಐಯುಟಿಯುಸಿ) ದ ಪದಾಧಿಕಾರಿಗಳು ಗುರುವಾರ ಜಿಪಂ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ಎಲ್ಲ ಕಾರ್ಮಿಕರಿಗೆ 4 ತಿಂಗಳು ಬಾಕಿ ಇರುವ ವೇತನ, ಪಿಎಫ್​ ಮತ್ತು ಇಎಸ್​ಐ ಕಡಿತ ಮಾಡಿದ ಬಗ್ಗೆ ರಸೀದಿ ನೀಡಬೇಕು. ರಾಷ್ಟ್ರೀಯ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸಿದರೆ ವಿಶೇಷ ಭತ್ಯೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಂಬಂಧಿಸಿದ ಅಧಿಖಾರಿಗಳು, ನಿಮ್ಮ ಬೇಡಿಕೆಗಳನ್ನು ತ್ವರಿತವಾಗಿ ಪರಿಹರಿಸುವ ಜತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್​ ನೀಡುವುದಾಗಿ ಭರವಸೆ ನೀಡಿದರು.

ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್​.ಟಿ., ನೇತೃತ್ವ ವಹಿಸಿದ್ದರು. ಜಿಲ್ಲಾಧ್ಯಕ್ಷೆ ಕಾಶಿಬಾಯಿ ಜನಗುಂಡ, ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net