ವಿಜಯಪುರ : ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ

IMG-20220906-WA0044
ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರ ಹಟ್ಟಿ ಹಾಗೂ ತಾಂಡಾಗೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿರುವ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
Published on

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರ ಹಟ್ಟಿ ಹಾಗೂ ತಾಂಡಾಗೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ಸಂಘಟನೆ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿರುವ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಮಾತನಾಡಿ, ಬಡ-ಗ್ರಾಮೀಣ ಕುಟುಂಬಗಳು ವಾಸವಾಗಿರುವ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರ ಹಟ್ಟಿ ಹಾಗೂ ತಾಂಡಾಗೆ ಸರಿಯಾಗಿ ಬಸ್‌ಗಳು ಇಲ್ಲದಿರುವುದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೂ ತುಂಬಾ ತೊಂದರೆಯಾಗಿದೆ. ಕರೊನಾ ಲಾಕ್‌ಡೌನ್‌ದಿಂದಾಗಿ ಮನೆಯಲ್ಲಿಯೇ ಇದ್ದು ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಿದ್ದಾರೆ ಎಂದರು.

ಈಗಲಾದರೂ ಸರಿಯಾಗಿ ಶಿಕ್ಷಣ ಪಡೆಯಬೇಕು. ಆದಾಯವಿಲ್ಲದೆ ಜನತೆ ಸಂಕಷ್ಟ ಎದುರಿಸುತ್ತಿದೆ. ಅಂತಹದರಲ್ಲಿ ಶಾಲಾ-ಕಾಲೇಜು ಹಾಗೂ ಮಾರುಕಟ್ಟೆಗೆ ಹೋಗಲು ದುಬಾರಿ ಅಟೋಗೆ ಹೆಚ್ಚಿನಹಣ ಕೊಟ್ಟು ಪ್ರಯಾಣಿಸುವುದು ಅಸಾಧ್ಯ. ಆದ್ದರಿಂದ ಸಾರ್ವಜನಿಕ ಸೇವೆಗಾಗಿಯೇ ಹೆಸರಾಗಿರುವ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಸರಿಯಾದ ಸಮಯಕ್ಕೆ ಬೆಳಗ್ಗೆ ಕಾಲೇಜಿಗೆ ಹೋಗಲು ಹಾಗೂ ಮರಳಿ ಬರಲು ಹೆಚ್ಚಿನ ಬಸ್‌ಗಳ ವ್ಯವಸ್ಥೆಯನ್ನು (ಕನಮಡಿ ಮಾರ್ಗವಾಗಿ) ಮಾಡಬೇಕು ಎಂದು ಒತ್ತಾಯಿಸಿದರು.

ಒಂದು ವಾರದಲ್ಲಿ ಬಸ್ ಸೌಲಭ್ಯ ಕಲ್ಪಿಸದಿದ್ದರೆ ತಿಕೋಟಾ-ಕನಮಡಿ ಮುಖ್ಯರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ವಿದ್ಯಾರ್ಥಿ ಮುಖಂಡರಾದ ಕಿರಣ ಬಡಿಗೇರ, ರಾಹುಲ ಬಾಗಲಕೋಟ, ನಾಗೇಶ ತೇಲಿ, ರಾಹುಲ ರಾಠೋಡ, ಅಮಿತ ಚವ್ಹಾಣ, ಅಂಕುಶ ರಾಠೋಡ, ಅವಿನಾಶ ಚವ್ಹಾಣ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net