ಬಸ್ ಪ್ರಯಾಣ ದರ ಇಳಿಸಲು ಒತ್ತಾಯ

MDG MANAVI
Published on

ಮುಂಡರಗಿ: ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ತಾಲೂಕು ಎಬಿವಿಪಿ ವತಿಯಿಂದ ಸೋಮವಾರ ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರ ಕೂಡಲೇ ಬಸ್​ಗಳ ಸಂಖ್ಯೆ ಹೆಚ್ಚಳ ಮಾಡಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು ಮತ್ತು ಏರಿಕೆ ಮಾಡಿರುವ ಬಸ್ ಪ್ರಯಾಣ ದರವನ್ನು ಇಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಚಾಲಕ ಮಹಾಂತಯ್ಯ ಹಿರೇಮಠ, ಸಂಜು ದೇವರಮನಿ, ಸಚಿನ್​ಕುಮಾರ ದೇಸಾಯಿ, ತೇಜು ಸೊರಟೂರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net