ರಸ್ತೆ ದುರಸ್ತಿಪಡಿಸಲು ಒತ್ತಾಯ

ರಸ್ತೆ ದುರಸ್ತಿಪಡಿಸಲು ಒತ್ತಾಯ
Published on

ಅರಸೀಕೆರೆ: ನಗರದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಪಡಿಸುವಂತೆ ಒತ್ತಾಯಿಸಿ ರೈತಸಂಘದ ಮುಖಂಡರು ಬಸ್ ನಿಲ್ದಾಣದ ಮುಂಭಾಗ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.

ಮುಖಂಡ ದಯಾನಂದ್ ಮಾತನಾಡಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಚಾಲಕರು ಪರದಾಡುವಂತಾಗಿದೆ.

ನಗರಸಭೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮಸ್ಯೆ ಅರಿತು ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು. ಶೀಘ್ರ ಕ್ರಮಕ್ಕೆ ಮುಂದಾಗದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಪ್ರಮುಖರಾದ ನಾಗವೇಣಿ, ಕೊಟ್ರೇಶ್, ನಿಂಗರಾಜು, ಭಾಗ್ಯಮ್ಮ ಹಾಗೂ ಕಾರು ಚಾಲಕರ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net