ಕೊಡಗಿನಲ್ಲಿ ಸೇನಾ ನೇಮಕಾತಿ ಕೇಂದ್ರ ಸ್ಥಾಪನೆಗೆ ಒತ್ತಾಯ

BOJANNA SOMAIHA
Published on

ಮಡಿಕೇರಿ: ಯೋಧರ ನಾಡು ಕೊಡಗಿನಲ್ಲಿ ಸೇನಾ ನೇಮಕಾತಿ ಕೇಂದ್ರ ಸ್ಥಾಪಿಸುವ ಮೂಲಕ ಸೇನಾ ಕ್ಷೇತ್ರದ ಬಗ್ಗೆ ಯುವ ಸಮೂಹದಲ್ಲಿ ಮತ್ತಷ್ಟು ಉತ್ತೇಜನವನ್ನು ತುಂಬಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.


ಕೇಂದ್ರದ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಪತ್ರ ಬರೆದಿರುವ ಅವರು ಕೊಡಗು ಜಿಲ್ಲೆಯ ಹೆಚ್ಚಿನ ಯುವಕರು ಸೇನಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸೇನಾ ನೇಮಕಾತಿ ಕೇಂದ್ರ ಸಹಕಾರಿಯಾಗಲಿದೆ ಎಂದು ವಿವರಿಸಿದ್ದಾರೆ. ಕೊಡಗಿನ ವೀರ ಯೋಧರು ಸೇನೆಯ ಮೂರೂ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಮತ್ತಷ್ಟು ಯುವಕ, ಯುವತಿಯರು ಸೇನೆಗೆ ಸೇರಲು ಅನುಕೂಲವಾಗುವಂತೆ ನೇಮಕಾತಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ.


ಮಾಜಿ ಸೈನಿಕರ ಕುಂದುಕೊರತೆಗಳ ನಿವಾರಣೆಗೆ ಸುಸಜ್ಜಿತವಾದ ಇಸಿಎಚ್ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಬೇಕು ಮತ್ತು ಯುವ ಸಮೂಹಕ್ಕೆ ಸ್ಫೂರ್ತಿ ತುಂಬಲು ಸೇನಾ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net