ರಾಜಕಾಲುವೆ ಒತ್ತುವರಿ ತೆರವಿಗೆ ಒತ್ತಾಯ

ರಾಜಕಾಲುವೆ ಒತ್ತುವರಿ ತೆರವಿಗೆ ಒತ್ತಾಯ
Published on

ಚನ್ನರಾಯಪಟ್ಟಣ: ಪಟ್ಟಣದ ವಾರ್ಡ್ ನಂ.10ರ ಬಿಎಂ ರಸ್ತೆಗೆ ಹೊಂದಿಕೊಂಡಿರುವ ಪುಟ್ಟಬೋರಮ್ಮ ಕಲ್ಯಾಣ ಮಂಟಪದ ಬಳಿ ರಾಜಕಾಲುವೆ ಹಾಗೂ ಸರ್ಕಾರಿ ಜಾಗ ಒತ್ತುವರಿಯಾಗಿದ್ದು, ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಸಂಬಂಧಿಸಿದವರು ಗಮನಹರಿಸಿ ಕ್ರಮವಹಿಸಬೇಕು ಎಂದು ಸ್ಥಳೀಯ ನಿವಾಸಿ ದೇವರಾಜ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ವಾರ್ಡ್ ನಂ 10ರ ನಾಗಸಮುದ್ರ ವ್ಯಾಪ್ತಿಯ ಸರ್ವೇ ನಂ.32,33 ಹಾಗೂ 34ರಲ್ಲಿ ಹಾದು ಹೋಗಿರುವ ರಾಜಕಾಲುವೆ ಒತ್ತುವರಿಯಾಗಿದ್ದು, ಈ ಬಗ್ಗೆ 2015 ರಿಂದಲೂ ಹೋರಾಟ ಮಾಡಲಾಗುತ್ತಿದ್ದು, ಯಾವೊಬ್ಬ ಅಧಿಕಾರಿಯೂ ಇತ್ತ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.
ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಈಗಾಗಲೇ ಸಾಕಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಯುಜಿಡಿ, ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಿಸಿಲ್ಲ. ಈ ಬಗ್ಗೆ ದೂರು ನೀಡಿದರೂ ಪುರಸಭೆ ಅಧಿಕಾರಿಗಳು ಪೂರಕವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಈಗಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಗಮನಕ್ಕೆ ವಿಚಾರ ತರಲಾಗಿದ್ದು, ಇದರನ್ವಯ ತಹಸೀಲ್ದಾರ್‌ಗೆ ಒತ್ತುವರಿ ತೆರವಿಗೆ ಮುಂದಾಗುವಂತೆ ಆದೇಶ ನೀಡಿದ್ದಾರೆ. ಆದರೆ, ಸರ್ವೇ ಇಲಾಖೆ ಸಿಬ್ಬಂದಿ ಸರ್ವೇ ನಡೆಸುತ್ತಿಲ್ಲ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net