ಮಂಗಳೂರು ವಿಮಾನ ನಿಲ್ದಾಣದಲ್ಲಿ 4.35 ಲಕ್ಷ ರೂ. ವಿದೇಶಿ ಕರೆನ್ಸಿ ವಶಕ್ಕೆ, ಓರ್ವನ ಬಂಧನ

currency new
Published on

ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಕೇರಳದ ಬಾರಿಕ್ಕಾಡ್ ಚಿತ್ತಾರಿ ನಿವಾಸಿ ತಾಜುದ್ದೀನ್ (39) ಬಂಧಿತ. ಈತ ಗುರುವಾರ ಸಾಯಂಕಾಲ 4.30ರ ವೇಳೆಗೆ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಸಿಐಎಸ್‌ಎಫ್ ಅಧಿಕಾರಿ ದೇವೇಂದರ್ ಸಿಂಗ್ ತಪಾಸಣೆ ನಡೆಸಿದಾಗ ಒಳ ಧಿರಿಸಿನಲ್ಲಿ ಯೂರೊ ಹಾಗೂ ಯುಎಇ ದಿರ‌್ಹಾಮ್ ಕರೆನ್ಸಿಗಳು ಪತ್ತೆಯಾಗಿವೆ.

ಆರೋಪಿ ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ತನಿಖೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net