ಅರಣ್ಯ ಇಲಾಖೆ ನೌಕರ ಆತ್ಮಹತ್ಯೆ

0201
Published on

ಹುಕ್ಕೇರಿ: ತಾಲೂಕಿನ ಬೆಳವಿ ಗ್ರಾಮದ ನಿವಾಸಿ ಹಾಗೂ ಚಿಕ್ಕೋಡಿಯಲ್ಲಿ ಅರಣ್ಯ ಇಲಾಖೆಯ ನೌಕರನಾಗಿದ್ದ ವಿನೋದ ಅಪ್ಪಾಸಾಹೇಬ ಮಗದುಮ್ಮ (34) ವಿಷ ಸೇವಿಸಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆ ತಾಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆಗೆ ಬರುವ ಮುನ್ನ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತನಿಗೆ ತಾಯಿ, ಪತ್ನಿ ಮತ್ತು ಪುತ್ರಿ ಇದ್ದಾರೆ. ಹುಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net