9 ಆನೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿ

9 ಆನೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿ
Published on

ಸಿದ್ದಾಪುರ: ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಕೃಷಿ ಫಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳಗಾರರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ 9 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಯಶಸ್ವಿಯಾಗಿದ್ದಾರೆ.

ಹಗಲಿನ ಸಮಯದಲ್ಲೇ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಜನತೆಯಲ್ಲಿ ಆತಂಕ ಸೃಷ್ಟಿಸುತ್ತಿದ್ದವು. ಇದರಿಂದ ತೋಟದಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು, ಶಾಲಾ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸಾರ್ವಜನಿಕರು ಒಬ್ಬೊಂಟಿಯಾಗಿ ಓಡಾಡಲು ಭಯಪಡುವಂತಿತ್ತು.

ಭಾನುವಾರ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಮೂರು ಮರಿಯೊಂದಿಗೆ ಒಂಬತ್ತು ಕಾಡಾನೆಗಳು ಕಾಣಿಸಿಕೊಂಡಿವೆ. ಮಾರ್ಗೊಳ್ಳಿ, ಘಟ್ಟತಳ, ಮಾರ್ಗವಾಗಿ ಕುಶಾಲನಗರ ವಲಯದ ದುಬಾರೆ ಅರಣ್ಯಕ್ಕೆ ಕಾಡಾನೆಗಳನ್ನು ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ನಿರ್ದೇಶನದ ಮೇರೆಗೆ ವಲಯ ಅರಣ್ಯಾಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಚೆನ್ನಂಗಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ, ಇಟಿಎಫ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್, ದುಬಾರೆ ಉಪವಲಯ ಅರಣ್ಯಾಧಿಕಾರಿ ಕೆ.ಪಿ.ರಂಜನ್, ಗಸ್ತು ಅರಣ್ಯ ಪಾಲಕ ರಾಜೇಶ್, ಆರ್‌ಆರ್‌ಟಿ ಹಾಗೂ ಇಟಿಎಫ್ ಸಿಬ್ಬಂದಿ ಶಂಕರ, ಭರತ್, ರಂಜಿತ್, ರೋಶನ್, ಪ್ರದೀಪ್, ಮುತ್ತಣ್ಣ, ಸುಂದರ, ದಿನು, ಧನು, ಸಚಿನ್, ಪೊನ್ನಣ್ಣ, ಕೃಷ್ಣಪ್ಪ, ಸಂಜು, ಶಿವು, ಗಗನ್, ರೋಹಿತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net