ಕಾಡಾನೆ ದಾಳಿಗೆ ಫಸಲು ನಾಶ

28 HANUR 5
Published on

ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಡೆಯರಪಾಳ್ಯ ಸಮೀಪದ ಆರ್.ಆರ್. ಕ್ಯಾಂಪ್ ಬಳಿಯ ಜಮೀನೊಂದಕ್ಕೆ ಭಾನುವಾರ ಬೆಳಗಿನ ಜಾವ ಕಾಡಾನೆಯೊಂದು ಲಗ್ಗೆ ಇಟ್ಟು ಫಸಲನ್ನು ನಾಶಪಡಿಸಿದೆ.

ಆರ್.ಆರ್. ಕ್ಯಾಂಪ್‌ನ ಮಹದೇವಸ್ವಾಮಿ ಅವರ ಜಮೀನಿನಲ್ಲಿ ರಾಗಿ, ಮುಸುಕಿನ ಜೋಳ, ಅರಿಶಿಣ ಬೆಳೆದಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಮೀಪದ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆ ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ತಿಂದು, ತುಳಿದು ನಾಶಪಡಿಸಿದೆ. ಜತೆಗೆ 2 ವರ್ಷದ ಹಿಂದೆ ಹಾಕಿದ್ದ ಕೆಲ ತೆಂಗಿನ ಸಸಿಗಳನ್ನು ಕಿತ್ತು ಬಿಸಾಡಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಮಹದೇವಸ್ವಾಮಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net