ಅರಣ್ಯ ಒತ್ತುವರಿ ತೆರವಿ ಮಾಡಿದ ಸಿಬ್ಬಂದಿ

8skpp1 forest otthvari teravu
ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ವ್ಯಾಪ್ತಿಯ ಕೊತ್ತನಹಳ್ಳಿ ಅಕೇಷಿಯ ನಡುತೋಪಿನಲ್ಲಿ ಅರಣ್ಯ ಇಲಾಖೆಯವರು ಒತ್ತುವರಿ ತೆರವು ಮಾಡಿದ್ದಾರೆ.
Published on

ಸಕಲೇಶಪುರ : ತಾಲೂಕಿನ ಯಸಳೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಯಸಳೂರು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿ ತೆರವು ಮಾಡಿದ್ದು ಇದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ.

ತಾಲೂಕಿನ ಸಹಾಯಕ ಅರಣ್ಯಾಧಿಕಾರಿ ಮಧುಸೂದನ್ ಮಾರ್ಗದರ್ಶನದಲ್ಲಿ ಯಸಳೂರು ವಲಯ ಅರಣ್ಯಾಧಿಕಾರಿ ಎಸ್.ಆರ್.ಕೃಷ್ಣ ನೇತೃತ್ವದಲ್ಲಿ ತಾಲೂಕಿನ ಯಸಳೂರು ಹೋಬಳಿಯ ಕೊತ್ತನಹಳ್ಳಿ ಅಕೇಷಿಯಾ ನೆಡುತೋಪಿನಲ್ಲಿ ಎಡಕೇರಿ ಗ್ರಾಮದ ವೈ.ಟಿ. ಪಾರ್ವತಮ್ಮ ಕೋ ಮಂಜೇಗೌಡ ಮತ್ತು ವೈ.ಎಂ. ನಾಗರಾಜು ಬಿನ್ ಮಂಜೇಗೌಡ ಅವರು ಸುಮಾರು 30 ಎಕರೆ ಅರಣ್ಯ ಪ್ರದೇಶದಲ್ಲಿ 12 ಎಕರೆಗೂ ಹೆಚ್ಚು ಜಾಗದಲ್ಲಿ ಬೇಲಿ ಮಾಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒತ್ತುವರಿ ತೆರವುಗೊಳಿಸಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಯಸಳೂರು ವಲಯ ಅರಣ್ಯಾಧಿಕಾರಿ ಕೃಷ್ಣ ಅವರು ಮರಡಿಕೆರೆ ಗ್ರಾಮದ ಸರ್ವೇ ನಂ.361/1ರಲ್ಲಿ ದಲಿತ ಮಹಿಳೆ ಅರಣ್ಯ ಪ್ರದೇಶದಲ್ಲಿ ಮನೆಯನ್ನು ಕಟ್ಟಿದ್ದಾರೆ ಎಂಬ ಆರೋಪದ ಮೇಲೆ ಮನೆ ತೆರವುಗೊಳಿಸಿದ್ದರು. ಇದು ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ದಲಿತ ಸಂಘಟನೆಗಳು ವಲಯ ಅರಣ್ಯಾಧಿಕಾರಿ ಕೃಷ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೆ ಶಾಸಕ ಸಿಮೆಂಟ್ ಮಂಜು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ತೆರವು ಕಾರ್ಯಾಚರಣೆ ಮುಂದುವರೆದಿದ್ದು ಮಲೆನಾಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net