ಕನಕಪುರ: ತಾಲೂಕಿನ ಸಾತನೂರು ಹೋಬಳಿ ಕಬ್ಬಾಳು ಅರಣ್ಯ ಪ್ರದೇಶದ ರೈತರ ಜಮೀನಿನಲ್ಲಿ ಪ್ರತ್ಯಕ್ಷವಾಗಿದ್ದ 4 ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯಲ್ಲಿ ಮಂಗಳವಾರ ಅರಣ್ಯ ನೌಕರನೊಬ್ಬರು ಮೃತಪಟ್ಟಿದ್ದಾರೆ.
ಚನ್ನಪಟ್ಟಣ ಎಲೆಕೆರೆ ಓಣಿಯ ನಿವಾಸಿ ಶ್ರೇಯಸ್ (21) ಮೃತ. ಕಬ್ಬಾಳು ಅರಣ್ಯ ಪ್ರದೇಶದಲ್ಲಿ ಆನೆ ಕಾರ್ಯಚರಣೆ ಆನೆಯೊಂದು ದಾಳಿ ಮಾಡಿತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.