ಅರಣ್ಯ ಪ್ರದೇಶದಲ್ಲಿ ಬಿದ್ದು ಅರಣ್ಯ ವೀಕ್ಷಕ ಸಾವು

Crime Logo
Published on

ಶಿಗ್ಗಾಂವಿ: ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಹೆಚ್ಚಾಗಿ ಅರಣ್ಯ ವೀಕ್ಷಕ ನೌಕರನೊಬ್ಬ ಅರಣ್ಯ ಪ್ರದೇಶದಲ್ಲಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮಮದಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬೆಂಡಲಗಟ್ಟಿ ಗ್ರಾಮದ ದೇವೇಂದ್ರಪ್ಪ ಹನುಮಂತಪ್ಪ ಜಾಡರ (56) ಮೃತ ನೌಕರ.

ಈತ ಮಮದಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದಾಗ ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಸುಸ್ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net