ಅರಣ್ಯಭೂಮಿ ಸಾಗುವಳಿದಾರರಿಗೆ ನೋಟಿಸ್‌ಗೆ ವಿರೋಧ

52
Published on

ಜಗಳೂರು: ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಕಚೇರಿ ಎದುರು ಜಮಾಯಿಸಿದ್ದ ರೈತರು, ಜಿಟಿಜಿಟಿ ಮಳೆಯಲ್ಲೂ ಕುಳಿತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶದ ಸ.ನಂ: 51, 52, 53 ಸರ್ಕಾರಿ ಭೂಮಿಯಲ್ಲಿ ರೈತರು ಅಂದಾಜು 40 ವರ್ಷಗಳಿಂದಲೂ ಸಾಗುವಳಿ ಮಾಡುತ್ತ ಜೀವನ ನಡೆಸುತ್ತಿದ್ದಾರೆ. ಅಂದಿನಿಂದಲೂ ಇಂದಿನವರೆಗೂ ಸಾಧೀನದಲ್ಲಿರುವ ಜಮೀನುಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡುವಂತೆ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಜಿಲ್ಲಾ ಕಾರ್ಯದರ್ಶಿ ಸತೀಶ್, ತಾಲೂಕಾಧ್ಯಕ್ಷ ಕಸವನಹಳ್ಳಿ ನಾಗರಾಜ್, ಮುಖಂಡರಾದ ಚಿಕ್ಕ ಉಜ್ಜಯಿನಿ ಕುಮಾರ್, ಹನುಮಂತಪ್ಪ ಜ್ಯೋತಿಕುಮಾರ್, ಪರಶುರಾಮ, ಕೆಂಚಮ್ಮ, ಕರಿಬಸಮ್ಮ, ಬಸಮ್ಮ, ಕಮಲಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net