ಕಾಡಂಚಿನ ಗ್ರಾಮಗಳಿಗೆ ಹಗಲಿನ ವೇಳೆ 3 ಫೇಸ್ ವಿದ್ಯುತ್ ಪೂರೈಕೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ಕಾರಕ್ಕೆ ಸಲಹೆ

Eshwar khandre1
Published on

ಮೈಸೂರು: ಅರಣ್ಯದಂಚಿನ ಗ್ರಾಮಗಳಲ್ಲಿ ಬೆಳಗ್ಗಿನ ಜಾವ ಹಾಗೂ ರಾತ್ರಿ ಆನೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಮಗಳಿಗೆ ಹಗಲು 3 ಫೇಸ್ ವಿದ್ಯುತ್ ನೀಡಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಲ್ಲಿ ಮನವಿ ಮಾಡಿದ್ದಾರೆ.

ಸರಗೂರು ತಾಲೂಕಿನ ಗದ್ದಹಳ್ಳ ಗ್ರಾಮದ ಯುವ ರೈತ ಜಮೀನಿಗೆ ನೀರು ಹಾಯಿಸಲು ತೆರಳಿದ ಸಂದರ್ಭ ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾನೆ. ಕಾಡಂಚಿನ ಗ್ರಾಮಗಳಲ್ಲಿ ಬೆಳಗ್ಗಿನ ಜಾವ ಹಾಗೂ ರಾತ್ರಿ ಕಾಡಾನೆ ಹಾವಳಿ ಹೆಚ್ಚಾಗಿ ಇರುತ್ತದೆ. ಹಾಗಾಗಿ ಹಗಲು ವಿದ್ಯುತ್ ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ಕುರಿತು ತಜ್ಞರು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅರಣ್ಯದಂಚಿನ ಗ್ರಾಮಗಳಿಗೆ ಹಗಲಿನ ವೇಳೆಯಲ್ಲಿ 3 ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಈಶ್ವರ ಖಂಡ್ರೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net