ಅಕ್ರಮ ಅರಣ್ಯ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ : ಅರಣ್ಯ ಸಚಿವ ಈಶ್ವರ ಖಂಡ್ರೆ

Eshwar_Khandre
Published on

ತುಮಕೂರು: ಸಣ್ಣ ಹಿಡುವಳಿದಾರರನ್ನು ಒಕ್ಕಲೆಬ್ಬಿಸದೆ ಅರಣ್ಯ ಭೂಮಿ ಸಂರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸಿದ್ದಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಅಧಿಕಾರಿಗಳ ಅಥವಾ ವ್ಯವಸ್ಥೆಯ ತಪ್ಪಿನಿಂದಾಗಿ ಬಡ ಜನರು ಅರಣ್ಯ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಕೆಲವೆಡೆ ಜನವಸತಿ ಪ್ರದೇಶಗಳಿವೆ. ಸರ್ವೇಯಲ್ಲಿ ಆ ಜಾಗಗಳು ಅರಣ್ಯ ಪ್ರದೇಶಕ್ಕೆ ಸೇರಿದ್ದು ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಕಂದಾಯ, ಅರಣ್ಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಿದ ಬಳಿಕ ಈ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ಸ್ಪಷ್ಟಪಡಿಸಿದರು.

"ನಾನು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದು ದೊರೆತಿರುವ ಖಾತೆಯಲ್ಲಿ ಪ್ರಾಮಾಣಿಕತೆಯಿಂದ ಈ ರಾಜ್ಯದ ಜನರ ಸೇವೆ ಮಾಡುವ ಸಂಕಲ್ಪ ಮಾಡಿದ್ದೇನೆ. ಕೆಲಸ ಮಾಡಿ ಮುಂದಿನ ಪೀಳಿಗೆ ಸ್ಮರಿಸುವಂತಹ ಕಾರ್ಯ ಮಾಡುತ್ತೇನೆ.

ಈಶ್ವರ ಖಂಡ್ರೆ

ಅರಣ್ಯ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net