ಅರಣ್ಯಾಧಿಕಾರಿಗಳ ವರ್ಗಾವಣೆ

11charan14
Published on

ಚಾಮರಾಜನಗರ: ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯಾಧಿಕಾರಿಗಳ ವರ್ಗಾವಣೆಯಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ನಿರ್ದೇಶಕ ಡಾ.ಸಂತೋಷ್‌ಕುಮಾರ್ ಅವರನ್ನು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಆಗಿ ನೇಮಕ ಮಾಡಲಾಗಿದೆ. ವಿ.ಏಡುಕೊಂಡಲು ಅವರನ್ನು ಕೋಲಾರ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ನಿರ್ದೇಶಕಿಯಾಗಿ ಮೈಸೂರಿನ ಡಿಸಿಎಫ್ ದೀಪಾ ನೇಮಕಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net