

ಸಂಬರಗಿ: ಗ್ರಾಮೀಣ ಪ್ರದೇಶದಲ್ಲಿ ನಕಲಿ ದಾಖಲೆಗಳನ್ನು ಸಷ್ಟಿಸುವ ವ್ಯಕ್ತಿ ಯಾರೇ ಆಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಹೇಳಿದರು.
ಪಟ್ಟಣದ ಮದಬಾವಿ ಗ್ರಾಮದಲ್ಲಿ ಈಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ನಕಲಿ ದಾಖಲೆ ಸೃಷ್ಟಿಮಾಡುವ ಕೆಲವು ವಿಷಯಗಳು ನನ್ನ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ನಕಲಿ ದಾಖಲೆಯಲ್ಲಿ ಅನ್ಯಾಯವಾಗಿರುವವರು ಇಲಾಖೆಗೆ ಅರ್ಜಿ ಸಲ್ಲಿಸಿದರೆ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.
ಅಥಣಿ ತಾಲೂಕಿನಲ್ಲಿ ನೆಡಲಾದ 4,600 ಸಸಿಗಳು ನೀರಿನ ಕೊರತೆಯಿಂದ ಗಡಿ ವಿಭಾಗದಲ್ಲಿ ಸಸಿಗಳು ಬತ್ತುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಬದಿ ಸಸಿಗೆ ನೀರು ಬಿಡಲು ಸೂಚಿಸುತ್ತೆನೆ. ಶೀಘ್ರದಲ್ಲಿ ಚಿಕ್ಕೋಡಿ ವಿಭಾಗ ಮಟ್ಟದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಅವರಿಗೆ ಸೂಚನೆ ನೀಡಲಾಗುವುದು.