ಗೋಮಾಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಮುಖಂಡರು ಬಂಗಾರಪೇಟೆ ತಾಲೂಕು ಕಚೇರಿ ಎದುರು ಕಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್​ ಪ್ರಭಾಕರನ್​ಗೆ ಮನವಿ ಸಲ್ಲಿಸಿದರು. ಸಂಘದ ಮುಖಂಡ ಮರಗಲ್​ ಶ್ರೀನಿವಾಸ್​, ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾಲೂಕು ಅಧ್ಯಕ್ಷ ಅಪ್ಪೋಜಿರಾವ್​, ನಾರಾಯಣಸ್ವಾಮಿ ಇದ್ದರು.
11
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಮುಖಂಡರು ಬಂಗಾರಪೇಟೆ ತಾಲೂಕು ಕಚೇರಿ ಎದುರು ಕಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್​ ಪ್ರಭಾಕರನ್​ಗೆ ಮನವಿ ಸಲ್ಲಿಸಿದರು. ಸಂಘದ ಮುಖಂಡ ಮರಗಲ್​ ಶ್ರೀನಿವಾಸ್​, ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾಲೂಕು ಅಧ್ಯಕ್ಷ ಅಪ್ಪೋಜಿರಾವ್​, ನಾರಾಯಣಸ್ವಾಮಿ ಇದ್ದರು.
Published on

ರೈತ ಸಂಘದಿಂದ ಉಪತಹಸೀಲ್ದಾರ್​ಗೆ ಮನವಿ -ಅಕ್ರಮ ಕಬಳಿಕೆಗೆ ಕಡಿವಾಣ ಹಾಕುವಂತೆ ಒತ್ತಾಯ



ಬಂಗಾರಪೇಟೆ: ತಾಲೂಕಿನ ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು ಹರಿಸಬೇಕು. ಕೆರೆ, ರಾಜಕಾಲುವೆ, ಗೋಮಾಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದಿಂದ ತಾಲೂಕು ಕಚೇರಿ ಮುಂಭಾಗ ಗುರುವಾರ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್​ ಪ್ರಭಾಕರನ್​ಗೆ ಮನವಿ ಸಲ್ಲಿಸಲಾಯಿತು
ಸಂಘದ ಮುಖಂಡ ಮರಗಲ್​ ಶ್ರೀನಿವಾಸ್​ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ಹರಿಯುತ್ತಿರುವ ಕೆ.ಸಿ.ವ್ಯಾಲಿ ಯೋಜನೆಯ ನೀರು 180 ಕೆರೆಗಳಿಗೆ ತಲುಪಿದ್ದು, ಅಂತರ್ಜಲ ವೃದ್ಧಿಯಾಗಿವೆ. ಆದರೆ, ಜಿಲ್ಲೆಯಾದ್ಯಂತ ಇರುವ ಎಲ್ಲ ಕೆರೆಗಳಿಗೂ ನೀರು ಹರಿಸಲು ಜನಪ್ರತಿನಿಧಿಗಳು ವಿಫಲವಾಗುತ್ತಿದ್ದಾರೆ. ಮಳೆಗಾಲದಲ್ಲಿ ವ್ಯರ್ಥವಾಗಿ ತಮಿಳುನಾಡು ಸೇರುವ ಹಾಗೂ ಬೆಂಗಳೂರು ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಬಂಗಾರಪೇಟೆ ತಾಲೂಕಿನ ಕೆರೆಗಳಿಗೆ ಹರಿಸುವ ಮೂಲಕ ರೈತರ ಹಿತಕಾಯಬೇಕು ಎಂದು ಒತ್ತಾಯಿಸಿದರು. ತಾಲೂಕಿನ ಕೆರೆ, ರಾಜಕಾಲುವೆ, ಗೋಮಾಳ, ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ, ಸರ್ವೇ ಇಲಾಖೆ ಅಧಿಕಾರಿಗಳು ಬೆಂಗಳೂರಿನ ರಿಯಲ್​ ಎಸ್ಟೇಟ್​ ಉದ್ದಿಮೆದಾರರೊಂದಿಗೆ ಶಾಮೀಲಾಗಿ 2 ಎಕರೆ ಜಾಗವನ್ನು ಖರೀದಿಸಿ ಅದರ ಪಕ್ಕದಲ್ಲಿರುವ ಹತ್ತಾರು ಎಕರೆ ಗೋಮಾಳ, ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ದಾಖಲೆ ಸಮೇತ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಒತ್ತುವರಿ ತೆರವುಗೊಳಿಸಬೇಕಾದ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿ ಸರ್ಕಾರಿ ಆಸ್ತಿ ಮಾರಾಟಕ್ಕಿಟ್ಟಿರುವುದು ದುರಾದೃಷ್ಟಕರ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂದ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾದ್ಯಂತ ಅರಣ್ಯ ಅಧಿಕಾರಿಗಳು ಬಲಾಡ್ಯರಿಂದ ಕಬಳಿಕೆಯಾಗಿರುವ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಲು ತಹಸೀಲ್ದಾರ್​ ಅವರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಒಂದು ವಾರದೊಳಗೆ ಕೆ.ಸಿ.ವ್ಯಾಲಿ ನೀರನ್ನು ತಾಲೂಕಿನ ಕೆರೆಗಳಿಗೆ ಹರಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಮಾಡಿ, ಅಕ್ರಮವಾಗಿ ಕೆರೆ ಮಣ್ಣನ್ನು ತಮಿಳುನಾಡು ಹಾಗೂ ಕೇರಳಕ್ಕೆ ಮಾರಾಟ ಮಾಡುವ ದಂಧೆಕೋರರ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ದಾಖಲು ಮಾಡಬೇಕೆಂದು ಒತ್ತಾಯಿಸಿದರು.
ರೈತ ಮುಖಂಡರಾದ ಲಕ್ಷ್ಮಣ್​, ಚಾಂದ್​ಪಾಷಾ, ಅಹ್ಮದ್​, ರಾಮಸಾಗರ ವೇಣು, ಯಲ್ಲಣ್ಣ, ಹರೀಶ್​, ಮಂಗಸಂದ್ರ ತಿಮ್ಮಣ್ಣ, ಕೃಷ್ಣಪ್ಪ, ಮುನಿಯಪ್ಪ, ಶೈಲಜಾ, ರತ್ನಮ್ಮ, ಮುನಿರತ್ನಮ್ಮ, ಗೌರಮ್ಮ, ಶಾಂತಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net