

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳು ಅತ್ಯಧಿಕವಾಗಿದ್ದು, ಲೋಕಸಭಾ ಚುನಾವಣೆ ಸಮಯದಲ್ಲಿ ಇವುಗಳು ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಲು ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶವನ್ನು ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂರ್ತಜಾಲದಲ್ಲಿ ಪ್ರಕಟಗೊಳ್ಳುವ ಸುದ್ದಿ, ಪ್ರಸಕ್ತ ವಿದ್ಯಮಾನಗಳು ಮತ್ತು ಓಟಿಟಿಗಳಲ್ಲಿ ಸುದ್ದಿಗಳು ಹರಡುವುದನ್ನು ಪರಿಶೀಲಿಸಿ, ಉಲ್ಲಂನೆ ಆಗುವ ವರದಿಗಳನ್ನು ನಿಯಂತ್ರಿಸಲು ವಿಷಯ ಪರಿಣಿತ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಟಕ ರಚಿಸಲಾಗಿದೆ. ಟಕ ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ.
ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿ ಕಚೇರಿ ತಾಂತ್ರಿಕ ಸಮಾಲೋಚಕರು, ನುರಿತ ಶಿಕರು ಸೇರಿ 20 ಜನರ ತಂಡ ಕಾರ್ಯನಿರ್ವಹಿಸುತ್ತಿದೆ. ಕೋಶವು ಸಾಮಾಜಿಕ ಜಾಲತಾಣಗಳಾದ ೇಸ್ಬುಕ್, ವಾಟ್ಸಪ್, ಟ್ವಿಟರ್, ಟೆಲಿಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್ಗಳಲ್ಲಿ ಪ್ರಸಾರವಾಗುವ ಸುದ್ದಿ ಮತ್ತು ಆಡಿಯೋ, ವಿಡಿಯೋ ಸಂದೇಶಗಳ ಮೇಲೆ ಹದ್ದಿನ ಕಣ್ಣು ಇಡಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂನೆಯಾಗುವ ಪ್ರಕರಣಗಳು ಕಂಡು ಬಂದಲ್ಲಿ, ಸಂಬಂಧಪಟ್ಟ ಸುದ್ದಿ ಅಥವಾ ವಿಡಿಯೋ ಪ್ರಸಾರದ ಮೂಲ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.