

ಚಿಕ್ಕಮಗಳೂರು: ರೈಲ್ವೇ ಇಲಾಖೆಗೆ ಸಂಬAಧಿಸಿದAತೆ ಮೂಲ ಸೌಕರ್ಯ ಹೆಚ್ಚಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರನ್ನು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿಗಳನ್ನು ರಚನೆ ಮಾಡಲು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲಹಾ ಸಮಿತಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಯನ್ನು ನಡೆಸಿ ಇಲಾಖೆಗೆ ವರದಿಯನ್ನು ಕಳುಹಿಸಬೇಕು ಎಂದು ಸೂಚನೆ ನೀಡಲಾಗುವುದು ಎಂದು ಹೇಳಿದರು.
ರಾಜ್ಯದ ೫೯ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಉz್ದೆÃಶಿಸಲಾಗಿದ್ದು, ಈಗಾಗಲೇ ೫೪ ರೈಲ್ವೆ ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳಲ್ಲಿ ಚಿಕ್ಕಮಗಳೂರು ನಿಲ್ದಾಣವೂ ಒಂದಾಗಿದೆ. ಇದಕ್ಕೆ ಈಗಾಗಲೇ ೨೬ ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರದಲ್ಲಿರುವ ರೈಲ್ವೆ ನಿಲ್ದಾಣಗಳು ಎಲ್ಲಾ ಮೂಲಭೂತ ಸವಲತ್ತುಗಳನ್ನು ಹೊಂದಿರಬೇಕು. ಈ ನಿಟ್ಟಿನಲ್ಲಿ ಚಿಕ್ಕಮಗಳೂರು ರೈಲ್ವೇ ನಿಲ್ದಾಣದಲ್ಲಿ ಪ್ರಮುಖವಾಗಿ ಮೀಟಿಂಗ್ ರೂಂ, ಶೌಚಗೃಹಗಳು, ರೆಸ್ಟೋರೆಂಟ್, ಟಿಕೆಟ್ ಕೌಂಟರ್ ತೆರೆಯಲು ಉz್ದÉÃಶಿಸಲಾಗಿದೆ ಎಂದರು.
ಚಿಕ್ಕಮಗಳೂರಿನಿAದ ಬೇಲೂರು, ಅರೇಹಳ್ಳಿ ಮಾರ್ಗವಾಗಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೇ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರ ಕಾರ್ಯವೂ ಕೂಡ ಮುಗಿದಿದೆ. ಹಾಸನ ಜಿಲ್ಲೆಯಲ್ಲಿ ರೈತರಿಂದ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿಲ್ಲ. ಸುಮಾರು ೩೦೦ ಎಕರೆ ಭೂಮಿ ಬೇಕಾಗಿದ್ದು, ಇನ್ನು ಏಳೆಂಟು ದಿನಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ. ರೈಲ್ವೆ ಯೋಜನೆಗೆ ಭೂಮಿ ಕೊಡುವ ರೈತರಿಗೆ ನಿಗದಿಗಿಂತ ನಾಲ್ಕು ಪಟ್ಟು ಹೆಚ್ಚು ಪರಿಹಾರವನ್ನು ನೀಡಲಾಗುತ್ತಿದೆ ಎಂದರು.
ರೈಲ್ವೆ ಕಾಮಗಾರಿಗೆ ರಾಜ್ಯ ಸರ್ಕಾರ ಭೂಮಿಯನ್ನು ಕೊಡಬೇಕೆಂದು ಈಗಾಗಲೇ ಮನವಿ ಮಾಡಿz್ದÉÃವೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಈ ಸಂಬAಧ ಅವರು ಈಗಾಗಲೇ ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದು ಸೂಚನೆ ನೀಡಿದ್ದಾರೆ. ಪ್ರತಿ ತಾಲೂಕು ಕೇಂದ್ರಗಳಿಗೆ ರೈಲ್ವೆ ಸಂಪರ್ಕ ಕಲ್ಪಿಸಬೇಕು ಎಂಬುದು ಕೇಂದ್ರ ಸರ್ಕಾರದ ಆಶಯವಾಗಿದೆ. ಇದರಿಂದ ಬಡವರಿಗೆ ಕಡಿಮೆ ದರದಲ್ಲಿ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಬೇಲೂರು ಶಾಸಕ ಸುರೇಶ್, ನೈಋತ್ಯ ರೈಲ್ವೆಯ ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರ್‌ವಾಲ್, ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯಪ್ರಕಾಶ್ ಶಾಸ್ತಿçÃ, ಮುಖ್ಯ ಆಡಳಿತಾಧಿಕಾರಿ (ಕಾಮಗಾರಿ) ರಾಮ್ ಗೋಪಾಲ್ ಮತ್ತಿತರರಿದ್ದರು.