ಬೀದಿಬದಿ ವ್ಯಾಪಾರಿಗಳ ಕುಂದುಕೊರತೆ ನಿವಾರಣಾ ಸಮಿತಿ ರಚನೆ

mcc
Published on

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ನಗರದ ಬೀದಿಬದಿ ವ್ಯಾಪಾರಿಗಳ ಕುಂದುಕೊರತೆ ಪರಿಹರಿಸಲು ಕುಂದುಕೊರತೆ ನಿವಾರಣಾ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.


ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ವೈ.ವಸಂತ್‌ಕುಮಾರ್ ಅಧ್ಯಕ್ಷತೆಯಲ್ಲಿ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಗೋವಿಂದಪ್ಪ, ಬೀದಿಬದಿ ವ್ಯಾಪಾರಿ ಹಾಗೂ ಸಾಮಾಜಿಕ ಕಾರ್ಯಕರ್ತ ಭಾಸ್ಕರ್, ಶ್ರೀನಿವಾಸ್‌ರಾಜೇ ಅರಸ್ ಸದಸ್ಯರಾಗಿದ್ದು, 5 ವರ್ಷದವರೆಗೆ ಇದು ಅಸ್ತಿತ್ವದಲ್ಲಿ ಇರುತ್ತದೆ.


ಸಮಿತಿಗೆ ಪಾಲಿಕೆ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಬೀದಿಬದಿ ವ್ಯಾಪಾರಿಗಳು ಕುಂದುಕೊರತೆ ಅಥವಾ ಸಮಸ್ಯೆ ಕುರಿತು ಅರ್ಜಿ ಸಲ್ಲಿಸಬಹುದು ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net