ಆರೋಗ್ಯದ ಜಾಗೃತಿಗಾಗಿ ವಾರ್ಡ್ ಸಮಿತಿ ರಚನೆ

17blrp3
Published on

ಬೇಲೂರು: ನಾಗರಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ವಾರ್ಡ್ ಸಮಿತಿ ರಚಿಸಲಾಗಿದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಹೇಳಿದರು.

ಸೋಂಕಿತರು ವಾಸಿಸುವ ಏರಿಯಾಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ 23 ವಾರ್ಡ್‌ಗಳಲ್ಲೂ ಮಾಜಿ ಸದಸ್ಯರು, ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ಸಮಿತಿ ರಚಿಸಲಾಗಿದ್ದು, ವಾರ್ಡ್‌ಗಳಲ್ಲಿ ಕರೊನಾ ನಿಯಂತ್ರಕ್ಕೆ ಶ್ರಮಿಸಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ತಹಸೀಲ್ದಾರ್ ನಟೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಕೋವಿಡ್ ವೈದ್ಯಾಧಿಕಾರಿ ಡಾ.ನರಸೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net