ಮೈತ್ರಿಯಿಂದ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾದ ಬಿಜೆಪಿ ಮಾಜಿ ಸಚಿವ: ಸಿಎಂ ಸಿದ್ದರಾಮಯ್ಯ ಜತೆ ಕೆ.ಸಿ.ನಾರಾಯಣಗೌಡ ಮಾತುಕತೆ

Former BJP minister K.C. Narayana Gowda joined the Congress mandya
Published on

ಮಂಡ್ಯ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರಲು ತಯಾರಿ ಮಾಡಿಕೊಂಡಿದ್ದಾರೆ. ಅದರಂತೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಘೋಷಣೆ ಬಳಿಕ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೆಸಿಎನ್, ಈಗಾಗಲೇ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದಂತೆ ಆಗ್ರಹಿಸುತ್ತಿದ್ದಾರೆ. ಆದರೆ ಮಂಡ್ಯ ಕ್ಷೇತ್ರ ಬಹುತೇಕ ಬಿಜೆಪಿಗೆ ಕೈತಪ್ಪುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಲು ಉತ್ಸುಕತೆ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ್ದಾರೆ.

ಮಾತ್ರವಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆಯೂ ಕೇಳಿಕೊಂಡಿದ್ದಾರೆ. ಆದರೆ ಬೇಡಿಕೆಗೆ ಸಿಎಂ ತಿರಸ್ಕರಿಸಿದ್ದು, ಮೊದಲೇ ಕಾಂಗ್ರೆಸ್ ಸೇರುವಂತೆ ಹೇಳಿದ್ದೆ. ಅಂದು ಸೇರಿದ್ದರೆ ಶಾಸಕ, ಸಚಿವ ಆಗುತ್ತಿದೆ. ಸಧ್ಯಕ್ಕೆ ಎಂಪಿ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ಖಚಿತಪಡಿಸಿದ್ದಾರೆ. ಮಾತ್ರವಲ್ಲದೆ ಮೊದಲು ಪಕ್ಷ ಸೇರಿ ಬಳಿಕ ಸ್ಥಾನಮಾನ ಒದಗಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಕೆಸಿಎನ್ ಕೂಡ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆಂದು ಆಪ್ತ ವಲಯಗಳಿಂದ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net