

ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 9ನೇ ಪುಣ್ಯತಿಥಿ ಅಂಗವಾಗಿ ಶನಿವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿ ಸ್ಥಳಕ್ಕೆ ಮಾಜಿ ಶಾಸಕ ಮಧುಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಮಧು ಬಂಗಾರಪ್ಪ, ಬಂಗಾರಪ್ಪ ಅವರ ಆದರ್ಶ ಹಾಗೂ ಸಿದ್ಧಾಂತಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದೇನೆ ಎಂದರು.
ಗ್ರಾಪಂ ಚುನಾವಣೆಯಲ್ಲಿ ಸೇವಾ ಮನೋಭಾವ ಹೊಂದಿದ ಯುವ ಮುಂದಾಳುಗಳು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು ನಮ್ಮ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗ್ರಾಪಂ ಅಧಿಕಾರ ಹಿಡಿಯುವುದು ಖಚಿತ ಎಂದರು.
ಅನಿತಾ ಮಧು ಬಂಗಾರಪ್ಪ, ಸೂರ್ಯ ಮಧು ಬಂಗಾರಪ್ಪ, ಕಾರವಾರ ಜಿಲ್ಲಾ ಕಾಂಗ್ರೆಸ್ ಮುಖಂಡ ಭೀಮಾನಾಯ್್ಕ ಜಿಪಂ ಸದಸ್ಯೆ ಶಿವಲಿಂಗೇಗೌಡ, ಸಾಗರ ತಾಪಂ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಷಣ್ಮುಖ ಸೂರಣಕಟ್ಟೆ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ.ಪಾಟೀಲ್, ಗುರು ಬರದವಳ್ಳಿ, ಎಚ್.ಗಣಪತಿ, ಎಂ.ಡಿ.ಶೇಖರ್, ತಾಪಂ ಸದಸ್ಯ ಎನ್.ಜಿ.ನಾಗರಾಜ್, ಬಿಎಸ್ಎನ್ಡಿಪಿ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು, ಕಲ್ಲಪ್ಪ ಚಿತ್ರಟ್ಟೆಹಳ್ಳಿ ಇತರರಿದ್ದರು.
1 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ವಣ: ಶಾಸಕ ಕುಮಾರ್ ಬಂಗಾರಪ್ಪ ಬಂಗಾರ ಧಾಮದಲ್ಲಿರುವ ಸಮಾಧಿಗೆ ಹಾಗೂ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಎಸ್.ಬಂಗಾರಪ್ಪ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಗಾರಪ್ಪ ಅವರ ಚಿಂತನೆಗಳನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗá-ವುದು ಎಂದು ಹೇಳಿದರು. ರೈತಪರ ಹಾಗೂ ಬಡವರ ಬಗ್ಗೆ ತಮ್ಮ ಅಧಿಕಾರ ಕಾಲದಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಿದ್ದರು. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಂಗಾರಪ್ಪ ಅವರು ಸ್ವತಃ ಕ್ರೀಡಾಪಟುಗಳಾಗಿದ್ದರು ಎನ್ನುವುದನ್ನು ಮನಗಂಡು ಪಟ್ಟಣದಲ್ಲಿ ಸುಸಜ್ಜಿತವಾದ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.