

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಪ್ರಾಪ್ತೆ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾತ್ಕಾಲಿಕವಾಗಿ ನಿರಾಳರಾಗಿದ್ದಾರೆ. ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬ೦ಧಿಸಿ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
* ಪ್ರಕರಣದ ಹಿನ್ನೆಲೆ:
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಎಸ್‌ವೈ ವಿರುದ್ಧ 2024ರ ಮಾರ್ಚ್ನಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎ-ïಐಆರ್ ದಾಖಲಾಗಿತ್ತು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಽಕಾರಿಗಳು ಯಡಿಯೂರಪ್ಪಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ವಿಚಾರಣೆಗೆ ಹಾಜರಾಗಿದ್ದ ಯಡಿಯೂರಪ್ಪ, ತಮ್ಮ ಹೇಳಿಕೆ ನೀಡಿದ್ದರು. ಈ ನಡುವೆ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಕೋರಿ ಯಡಿಯೂರಪ್ಪ, ಹೈಕೋರ್ಟ್ಗೆ ಪ್ರತ್ಯೇಕ 2 ಅರ್ಜಿಗಳನ್ನು ಸಲ್ಲಿಸಿದ್ದರು.
ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು 2024ರ ಜೂನ್‌ನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು. ಯಡಿಯೂರಪ್ಪ ಅವರನ್ನು ಬಂಧಿಸದ0ತೆ ಸಿಐಡಿ ಅಽಕಾರಿಗಳಿಗೆ ಸೂಚಿಸಿತ್ತು. ನಂತರ ವಿಚಾರಣೆಗೆ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿತ್ತು. ಅಂತಿಮವಾಗಿ 2025ರ ಜ. 17ರಂದು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಹೈಕೋರ್ಟ್ ಪೀಠ ಪ್ರಕರಣ ರದ್ದು ಮಾಡಲು ನಿರಾಕರಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣವನ್ನು ಪೋಕ್ಸೋ ಕೋರ್ಟ್ಗೆ ವಹಿಸಿದ್ದು, ಇನ್ನು ಮುಂದೆ ಯಡಿಯೂರಪ್ಪ ಪೋಕ್ಸೋ ಕೋರ್ಟ್ನಲ್ಲೇ ವಿಚಾರಣೆ ಎದುರಿಸಬೇಕಿದೆ.