ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ನಿಂದ ಅನುಕೂಲ ಆಯ್ತ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

HDK
Published on

ಮಂಡ್ಯ: ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲೂ ಅಭ್ಯರ್ಥಿ ಹಾಕಬೇಕು ಎಂಬ ಅಭಿಪ್ರಾಯ ಇದೆ. ನಾನು ಮೈತ್ರಿ ಮಾಡಿಕೊಂಡರೆ, ಮೈತ್ರಿ ಮಾಡಿಕೊಳ್ಳದ ಕ್ಷೇತ್ರದಲ್ಲಿ ಕಾರ್ಯಕರ್ತರು ಏನು ಮಾಡುತ್ತಾರೆಂದು ಮಾಜಿ ಸಿಎಂ ಎಚ್‌ಡಿಕೆ ಪ್ರಶ್ನಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಏನು ಅನುಕೂಲ ಆಗಿದ್ಯಾ?. ಅವರಿಂದ ನಮ್ಮ ಕುತ್ತಿಗೆ ಕುಯ್ಯುವ ಕೆಲಸ ಆಯ್ತು. ಮೈತ್ರಿಯಿಂದ ನನ್ನ ಕಾರ್ಯಕರ್ತರು ಬಲಿಪಶುಗಳು ಆಗಬಾರದು. ಮೈತ್ರಿ ಆಗದೇ ಇದ್ದಿದ್ದರೆ ಮಂಡ್ಯದಲ್ಲಿ ಸೋಲುವ ಪ್ರಶ್ನೆ ಇರುತ್ತಾ ಇರಲಿಲ್ಲ. ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂದುಕೊಂಡಿದ್ದೇವೆ. 28 ಕ್ಷೇತ್ರದಲ್ಲಿ ಗೆಲ್ಲುತ್ತೇವೆಂದು ನಾನು ಹೇಳಲ್ಲ. ಆದೆ ನಾಲ್ಕೈದು ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ. 28 ಕ್ಷೇತ್ರಗಳಲ್ಲಿ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ ಎಂದರು.

ಸದ್ಯಕ್ಕೆ ರಾಜಕೀಯದ ಸಹವಾಸಕ್ಕೆ ಹೋಗಬೇಡ ಎಂದು ನಿಖಿಲ್‌ಗೆ ಸಲಹೆ ನೀಡಿದ್ದೇನೆ. ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಹೀಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವು ಸಂಸ್ಥೆಗಳು ಮುಂದೆ ಬಂದಿವೆ. ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾರೆ. ಈಗಾಗಲೇ ಎರಡು ಬಾರಿ ನಿಖಿಲ್ ಸೋತಿದ್ದಾನೆ ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು. ನಾನು ಒತ್ತಡಗಳ ಮೇಲೆ ಚುನಾವಣೆ ಮಾಡಲ್ಲ ಎಂದ ಅವರು, ರಾಜ್ಯದಲ್ಲಿ ಆಪರೇಷನ್ ಹಸ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಕ್ಷನಿಷ್ಠೆ ಯಾರಲ್ಲೂ ಉಳಿದಿಲ್ಲ. ವೈಯಕ್ತಿಕ ಸ್ಥಾನಮಾನಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಧ್ಯ ನಮ್ಮ ಪಕ್ಷದಲ್ಲಿದ್ದಾರೆ. ಪಕ್ಷಾಂತರ ಬಗ್ಗೆ ಅವರನ್ನೇ ಕೇಳಬೇಕು. ನಾನು ಈ ಬಗ್ಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net