ಸಂಸತ್ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನ: ಇದಕ್ಕೆ ಕಾರಣ ಯಾರೆಂದು ವಿವರಿಸಿದ ಮಾಜಿ ಸಿಎಂ ಎಚ್ಡಿಕೆ...!

HDK Congress
Published on

ಮಂಡ್ಯ: ಲೋಕಸಭಾ ಚುನಾವಣೆ ನಂತರ ಅಂದರೆ ಮುಂದಿನ ಡಿಸೆಂಬರ್ ಒಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಇದಕ್ಕೆ ಆ ಪಕ್ಷದ ನಾಯಕರೇ ಕಾರಣವಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.

ನಗರದಲ್ಲಿ ಗುರುವಾರ ಆಯೋಜಿಸಿದ್ದ ಮೈತ್ರಿ ಪಕ್ಷದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರದ ಪತನಗೊಳಿಸಲು ಕಾಂಗ್ರೆಸ್ಸಿಗರೇ ಮುಂದಾಗಿದ್ದಾರೆ. ಇದು ಆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ. ಇದು ಜನಸಾಮಾನ್ಯರ ಅರಿವಿಗೆ ಬಂದಿಲ್ಲ ಎಂದರು.

ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಂದರ್ಭ ನಾನು ಅಧಿಕಾರ ಹಸ್ತಾಂತರ ಮಾಡಲಿಲ್ಲ ಎನ್ನುವ ಕೆಟ್ಟ ಅಭಿಪ್ರಾಯ ಇಂದಿಗೂ ಇದೆ. ಆದರೆ ಅಂದು ನನ್ನದಲ್ಲದ ತಪ್ಪಿಗೆ ಹಾಗೂ ಕೆಲ ಕಾಣದ ಕೈಗಳ ಸಂಚಿನಿಂದಾಗಿ ನಾನು ತಪ್ಪಿನ ಹೊಣೆ ಹೊರಬೇಕಾಯಿತು. ಸುಳ್ಳು ಹೇಳುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲ, ಕಾಂಗ್ರೆಸ್‌ನವರು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿರುವ ಕಾನೂನು ಅರಿತು ಮಾತನಾಡಬೇಕು. ನಮ್ಮ ತೆರಿಗೆ ನಮ್ಮ ಹಕ್ಕು ಎಂದರೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net