ಮಾಜಿ ಸಿಎಂ ಎಚ್ಡಿಕೆ ಸಂಧಾನ ಸಫಲ: ಜೆಡಿಎಸ್‌ಗೆ ಮರಳಿದ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ

Former CM HDK visits Vijayananda residence Mandya
Published on

ಮಂಡ್ಯ: ನಿತ್ಯಸಚಿವ ಕೆ.ವಿ.ಶಂಕರಗೌಡರ ಮೊಮ್ಮಗ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಭೇಟಿ ನೀಡಿ ಮಾತೃಪಕ್ಷಕ್ಕೆ ಮರಳಿ ಬರುವಂತೆ ಆಹ್ವಾನಿಸಿದರು.

ನಗರದ ಬಂದೀಗೌಡ ಬಡಾವಣೆಯಲ್ಲಿರುವ ವಿಜಯಾನಂದ ನಿವಾಸಕ್ಕೆ ಎಚ್‌ಡಿಕೆ, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿದರು.

ಹಿಂದಿನ ಕಹಿ ಘಟನೆಗಳನ್ನು ಮರೆತು ಜೆಡಿಎಸ್‌ಗೆ ಮರಳಿ ಪಕ್ಷದ ಬಲವರ್ಧನೆಯಲ್ಲಿ ತೊಡಗಬೇಕು. ಮೈತ್ರಿ ಅಭ್ಯರ್ಥಿಯಾಗಲಿರುವ ನನ್ನ ಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ ಕುಮಾರಸ್ವಾಮಿ ಅವರ ಆಹ್ವಾನಕ್ಕೆ ಸ್ಪಂದಿಸಿದ ವಿಜಯಾನಂದ, ನಾಳೆಯಿಂದಲೇ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಭರವಸೆ ನೀಡಿದರು. ಇದರೊಂದಿಗೆ ಮತ್ತೊರ್ವ ಯುವನಾಯಕ ಪಕ್ಷ ಸೇರ್ಪಡೆಯಾದಂತಾಗಿದೆ. ಇದೇ ಸಂದರ್ಭದಲ್ಲಿ ಸುಮಾರು ಹೊತ್ತು ಗೌಪ್ಯ ಮಾತುಕತೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ತಾಪಂ ಮಾಜಿ ಸದಸ್ಯ ತಿಮ್ಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net