ರಾಜ್ಯಕ್ಕೆ ಮಾಜಿ ಸಿಎಂ ಡಿ. ದೇವರಾಜ ಅರಸು ಕೊಡುಗೆ ಅಪಾರ

Former CM of the state d. Devraj Arasu's contribution is immense
ಬೀಳಗಿ ಕಚೇರಿ ಸಭಾಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಜಯಂತ್ಯುತ್ಸವದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಸುಹಾಸ ಇಂಗಳೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಆರ್. ಕೋಟಿ, ತಾಪಂ ಇಒ ಸಿದ್ದು ನಕ್ಕರಗುಂದಿ ಇದ್ದರು.
Published on

ಬೀಳಗಿ: ರಾಜ್ಯ ಕಂಡ ಅಪರೂಪದ ವ್ಯಕ್ತಿತ್ವವುಳ್ಳ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ತಮ್ಮ ಅಧಿಕಾರಾವಧಿಯಲ್ಲಿ ಶೋಷಿತ ಸಮುದಾಯಗಳ ಜನಪರ ಯೋಜನೆಗಳ ಮಾದರಿಯಾಗಿವೆ ಎಂದು ತಹಸೀಲ್ದಾರ್ ಸುಹಾಸ ಇಂಗಳೆ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 108ನೇ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಮ್ಮ ಆಡಳಿತದಲ್ಲಿ ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾನೂನು ಜಾರಿಗೊಳಿಸಿದ್ದಾರೆ. ಭೂ ಸುಧಾರಣೆ, ಊಳುವವನೇ ಹೊಲದ ಒಡೆಯ ಎನ್ನುವ ಕಾನೂನು ಜಾರಿಗೆ ತಂದರಲ್ಲದೆ, ರಾಜ್ಯದ ಸರ್ವ ಜನಾಂಗದವರ ಕಲ್ಯಾಣಕ್ಕಾಗಿ ಅನೇಕ ಜನಪರ ಕಾರ್ಯಕ್ರಮ ನೀಡಿದ್ದಾರೆ.

ಅವರ ತತ್ವಾದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ವಾರ್ಡ್‌ನ್ ಜಿ.ಆರ್. ಗುರುನಾಥ ತಳವಾರ ಉಪನ್ಯಾಸ ನೀಡಿದರು.

ತಾಪಂ ಇಒ ಸಿದ್ದು ನಕ್ಕರಗುಂದಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೀನಾಕ್ಷಿ ಕೋಟಿ, ಪಪಂ ಮುಖ್ಯಾಧಿಕಾರಿ ದೇವೀಂದ್ರ ಧನಪಾಲ, ಬಿಇಒ ಎಸ್.ಆರ್. ಆದಾಪೂರ, ಸಮಾಜ ಕಲ್ಯಾಣ ಅಧಿಕಾರಿ ಎಚ್.ಎಂ. ಪಾಟೀಲ ಇತರರಿದ್ದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net