ಮಾಜಿ ಸಿಎಂ ರಾಮಕೃಷ್ಣ ಹೆಗಡೆ 98ನೇ ಜನ್ಮದಿನೋತ್ಸವ

26sdp5(Ramakrishna Hegde)
Published on

ಸಿದ್ದಾಪುರ: ಪಟ್ಟಣದ ಚೇತನಾ ವಿಜ್ಞಾನ ಪಪೂ ಮಹಾವಿದ್ಯಾಲಯದ ಸಭಾ ಭವನದಲ್ಲಿ ಆ.29 ರಂದು ಬೆಳಗ್ಗೆ 11 ಗಂಟೆಗೆ ಸ್ಥಳೀಯ ಶಿಕ್ಷಣ ಪ್ರಸಾರಕ ಸಮಿತಿ ಹಾಗೂ ರಾಮಕೃಷ್ಣ ಹೆಗಡೆ ಚಿರಂತನ ಸಂಸ್ಥೆ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ 98ನೇ ಜನ್ಮದಿನೋತ್ಸವ ನಡೆಯಲಿದೆ.

ಯಲ್ಲಾಪುರದ ಕು.ಶ್ರೇಯಾ ಭಟ್ಟ ರಚಿಸಿದ ರಾಮಕೃಷ್ಣ ಹೆಗಡೆ ಭಾವ ಚಿತ್ರವನ್ನು ಅನಾವರಣಗೊಳಿಸುವ ಮೂಲಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸುವರು. ಹೆಗಡೆ ಮತ್ತು ಜಾತ್ಯತೀತತೆ ವಿಷಯದ ಕುರಿತು ಹಿರಿಯ ಸಾಹಿತಿ ಮಹಾಬಲಮೂರ್ತಿ ಕೊಡ್ಲಕೆರೆ ಉಪನ್ಯಾಸ ನೀಡುವರು. ರಾಮಕೃಷ್ಣ ಹೆಗಡೆ ಚಿರಂತನ ಸಂಸ್ಥೆ ಅಧ್ಯಕ್ಷ ಡಾ.ಶಶಿಭೂಷಣ ಹೆಗಡೆ ದೊಡ್ಮನೆ ಅಧ್ಯಕ್ಷತೆ ವಹಿಸುವರು.

ಶಿರಸಿ ತಾಲೂಕು ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ಜಿ.ಟಿ. ಹೆಗಡೆ ತಟ್ಟಿಸರ ಹಾಗೂ ಸಿದ್ದಾಪುರದ ದೇವಿದಾಸ ಶೇಟ್ ಹಾಳದಕಟ್ಟಾ ಅವರನ್ನು ಸನ್ಮಾನಿಸಲಾಗುವುದು.

ಮಧ್ಯಾಹ್ನ 2.30 ಗಂಟೆಗೆ ಶರಸೇತು ಬಂಧ ಯಕ್ಷಗಾನ ತಾಳಮದ್ದಲೆ ನಡೆಯಲಿದೆ. ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ ಯಲ್ಲಾಪುರ ಸಹಕರಿಸುವರು. ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ನಾರಾಯಣ ಯಾಜಿ ಸಾಲೆಬೈಲ್, ಜಿ.ಕೆ ಭಟ್ಟ ಕಶಿಗೆ, ಮಹಾಬಲಮೂರ್ತಿ ಕೊಡ್ಲಕೆರೆ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net