ಮಾಜಿ ಸಿಎಂ ಸಿದ್ದರಾಮಯ್ಯಗೆ ದಲಿತ ರತ್ನ ಪ್ರಶಸ್ತಿ

WhatsApp Image 2022-08-12 at 4.57.47 PM
Published on

ಮಡಿಕೇರಿ: ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ನೀಡಲಾಗುವ ’ದಲಿತ ರತ್ನ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪ್ರಧಾನ ಮಾಡಲಾಗುವುದು ಎಂದು ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ತಿಳಿಸಿದರು.


೪ನೇ ವರ್ಷದ ಪ್ರಶಸ್ತಿಯನ್ನು ಸಮಾಜ ಮುಖಿ ಸೇವೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ನೀಡಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಅಕ್ಟೋಬರ್ ಕೊನೆ ವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಪ್ರೊ.ಬಿ.ಕೃಷ್ಣಪ್ಪರವರ ಜನ್ಮದಿನೋತ್ಸವ ಪ್ರಯುಕ್ತ ದಾವಣಗೆರೆಯಲ್ಲಿ ಆ೧೩ ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಪರಿವರ್ತನಾ ಶಿಬಿರ ಮತ್ತು ರಾಜ್ಯ ಸಮಿತಿ ಸಭೆಗೆ ಜಿಲ್ಲೆಯಿಂದ ೫೦ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.


ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಜಿಲ್ಲಾ ಸಹಸಂಚಾಲಕ ಎಚ್.ಎಸ್.ಗಣೇಶ್, ವಿರಾಜಪೇಟೆ ತಾಲೂಕು ಸಂಚಾಲಕ ವೇಲುಸ್ವಾಮಿ, ಮಡಿಕೇರಿ ನಗರ ಸಂಚಾಲಕ ಸಿದ್ದೇಶ್ವರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net