ಬಾಬೂಜಿ ಭಾವಚಿತ್ರಕ್ಕೆ ಶ್ರೀರಾಮುಲು ಪುಷ್ಪಾರ್ಪಣೆ

05042022 bellary jagajivanaram jayanti
Published on

ಬಳ್ಳಾರಿ: ನಗರದ ಡಾ.ಬಾಬು ಜಗಜೀವನರಾಂ ಭವನದ ಆವರಣದಲ್ಲಿ ಜಿಲ್ಲಾಡಳಿತದಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿ.ಡಾ.ಬಾಬು ಜಗಜೀವನ ರಾಮ್ ಅವರ 115ನೇ ಜಯಂತ್ಯುತ್ಸವ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಜಿಪಂ ಸಿಇಒ ಜೆ. ಲಿಂಗಮೂರ್ತಿ, ಎಸ್ಪಿ ಸೈದುಲು ಅದಾವತ್, ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಅಧ್ಯಕ್ಷ ಉಮೇಶ, ಮಾಜಿ ಸಂಸದ ಸಣ್ಣ ಫಕೀರಪ್ಪ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net