

ಉಡುಪಿ: ಮಾಜಿ ಗೃಹ ಸಚಿವ, ನವ ಉಡುಪಿ ನಿಮಾರ್ತೃ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಸಂಕೀರ್ಣ ಮಣಿಪಾಲ ರಜತಾದ್ರಿ ಮುಂಭಾಗದಲ್ಲಿರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಶಾಸಕ ಯಶ್ಪಾಲ್ ಎ. ಸುವರ್ಣ ಮಾಲಾರ್ಪಣೆಗೈದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಪ್ ಡಿಸೋಜ, ಪ್ರಮುಖರಾದ ನಳಿನಿ ಪ್ರದಿಪ್ ರಾವ್, ವೀಣಾ ಎಸ್. ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಅಶೋಕ್ ನಾಯ್ಕ್, ಕಲ್ಪನಾ ಸುಧಾಮ ಮೊದಲಾದವರು ಉಪಸ್ಥಿತರಿದ್ದರು.