ಕಾಂಗ್ರೆಸ್ ಗೆದ್ದರೆ ಚೊಂಬು ಗ್ಯಾರಂಟಿ: ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕೆ

Former minister CT Ravi criticizes Congress mandya
Published on

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಜನರ ಕಿವಿಗೆ ಚೆಂಡು ಹೂವು ಹಾಗೂ ಕೈಗಳಿಗೆ ಚೊಂಬು ಸಿಗುವುದು ಗ್ಯಾರಂಟಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಯುವ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯಕ್ಕೆ ಬೆಂಗಳೂರಿಗೆ ನೀರಿಲ್ಲ. ಆದರೆ ತಮಿಳುನಾಡಿಗೆ ನೀರು ಬಿಟ್ಟು ಜನರಿಗೆ ಖಾಲಿ ಚೊಂಬು ನೀಡಿದ್ದಾರೆ. ಕಾಂಗ್ರೆಸ್‌ನ ಆಡಳಿತದಲ್ಲಿ ದೇಶ ದಿವಾಳಿಯ ಸ್ಥಿತಿಗೆ ಹೋಗಿತ್ತು. ಭೂಮಿ, ಆಕಾಶ, ಪಾತಾಳದಲ್ಲಿ ಭ್ರಷ್ಟಾಚಾರ ವ್ಯಾಪಿಸಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಭ್ರಷ್ಟಾಚಾರ ನಡೆದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಪ್ರತಿದಿನ ಬಾಂಬ್ ಸ್ಫೋಟದ ಸುದ್ದಿ ಬರುತ್ತಿತ್ತು. ರಾಜ್ಯದಲ್ಲಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕದೆ, ಬಿರಿಯಾನಿ ತಿನ್ನಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ದೇಶ ವಿರೋಧಿಗಳ ಬಾಲ ಕತ್ತರಿಸುವ ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ ಅವರ ಬಡವರ ಪರವಾದ ಯೋಜನೆಗಳಾದ ಜನಧನ್, ಗ್ಯಾಸ್ ಸಿಲಿಂಡರ್ ಪೂರೈಕೆ, 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ, ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು, ದೇಶದ ಜನತೆಗೆೆ ಉಚಿತ ಕೋವಿಡ್ ಲಸಿಕೆ ನೀಡಿ ಜೀವ ಉಳಿಸುವ ಯೋಜನೆ ಮಾಡಿದೆ. ಕಾಂಗ್ರೆಸ್‌ನ ಯಾವುದೇ ಯೋಜನೆಗಳು ಇದಕ್ಕೆ ಸಮವಲ್ಲ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದ ಸಂಚಾಲಕ ಸಿ.ಪಿ.ಉಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ರಾಷ್ಟ್ರೀಯ ಕೋಶಾಧ್ಯಕ್ಷ ಸಿದ್ದಾರ್ಥ, ರಾಷ್ಟ್ರೀಯ ಯುವ ಮೋರ್ಚಾ ಕಾರ್ಯದರ್ಶಿ ಸ್ವಾಮಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರಘುಗೌಡ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಎಚ್.ಆರ್.ಅರವಿಂದ್, ನಾಗಾನಂದ, ವಿವೇಕ್, ಶ್ರೀಧರ್, ರವಿ, ಮಹೇಶ್‌ಗೌಡ, ವಸಂತ್‌ಕುಮಾರ್, ನರಸಿಂಹ, ಅರುಣ್‌ಕುಮಾರ್, ಸವ್ಯಸಾಚಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net