ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ವಿಧಿವಶ

HT Krishnappa
Published on

ಬೆಂಗಳೂರು: ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾರ್ಚ್​ 18) ತಡರಾತ್ರಿ ನಿಧನರಾಗಿದ್ದಾರೆ.

ಈ ಹಿಂದೆ ನಾಗಮಂಗಲ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕೃಷ್ಣಪ್ಪ ಅವರು ಜನತಾ ಪಾರ್ಟಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಆರೋಗ್ಯ ,ರೇಷ್ಮೆ, ಅಬಕಾರಿ ಖಾತೆಗಳನ್ನು ನಿಭಾಯಿಸಿದ್ದರು.

ಕೃಷ್ಣಪ್ಪ ಅವರು ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಅನುಯಾಯಿ ಆಗಿದ್ದರು. ನಾಗಮಂಗಲದಲ್ಲಿ ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net