ಕಾಂಗ್ರೆಸ್ ಸರ್ಕಾರದ ವಿರುದ್ಧ ನ.3 ಕ್ಕೆ ಪ್ರತಿಭಟನೆ

hnl bjp oct 25
filter: 0; fileterIntensity: 0.0; filterMask: 0; captureOrientation: 180; runfunc: 0; algolist: 0; multi-frame: 1; brp_mask:8; brp_del_th:0.0016,0.0002; brp_del_sen:0.0500,0.0500; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 304.99988;aec_lux_index: 0;albedo: ;confidence: ;motionLevel: 0;weatherinfo: weather?null, icon:null, weatherInfo:100;temperature: 35;zeissColor: bright;
Published on

ಹೊನ್ನಾಳಿ: ತಾಲೂಕಿನ ರಸ್ತೆ ಗುಂಡಿಗಳನ್ನು ಮುಚ್ಚದಿರುವುದನ್ನು, ಅರ್ಹ ಫಲಾನುಭವಿಗಳ ಪಡಿತರ ಚೀಟಿ ರದ್ದು ಮಾಡಿರುವುದನ್ನು ಮತ್ತು ಬಿದ್ದ ಮನೆಗಳಿಗೆ ಪರಿಹಾರ ನೀಡದೆ ಇರುವುದನ್ನು ಖಂಡಿಸಿ ನ.3 ಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶನಿವಾರ ತಾಲೂಕು ಬಿಜೆಪಿ ಘಟಕದಿಂದ ಏರ್ಪಡಿಸಿದ್ದ ಬಿಎಲ್​ಎ-2 ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಹುಲ್ ಗಾಂಧಿ ಈಗ ಸಂವಿಧಾನದ ಪುಸ್ತಕ ಹಿಡಿದು ಬಿಜೆಪಿ ಮತಗಳ್ಳತನ ಮಾಡಿದೆ ಎಂದು ಆರೋಪಿಸುತ್ತ ಓಡಾಡುತ್ತಿದ್ದಾರೆ. ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುಂಚೆ ಯಾವ ರೀತಿ ಮತದಾನ ನಡೆಯುತ್ತಿತ್ತು ಎಂದು ಒಮ್ಮೆ ನೆನಪಿಸಿಕೊಳ್ಳಲಿ ಎಂದರು.

ಮುಂಬರುವ ಎಲ್ಲ ಚುನಾವಣೆಗಳನ್ನು ಗೆಲ್ಲಬೇಕಾದರೆ ಮೊದಲು, ಬೂತ್ ಮಟ್ಟದಲ್ಲಿ ಮತದಾರರ ಹೆಸರು ಬಿಟ್ಟಿದ್ದರೆ ಸೇರಿಸುವುದು, ಮೃತಪಟ್ಟವರ ಹೆಸರು ಡಿಲಿಟ್ ಮಾಡಿಸುವುದು ಹಾಗೂ ಹೊಸದಾಗಿ ಸೇರ್ಪಡೆ ಮಾಡಿಸುವ ಕೆಲಸ ನಮ್ಮ ಪಕ್ಷದ ಬಿಎಲ್​ಎಗಳು ಮಾಡಿಸಿದ್ದರೆ ಕಮಲ ಪಕ್ಷ ಅರ್ಧ ಗೆದ್ದ ಹಾಗೆ ಎಂದು ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಚಿ ಕ್ಷೇತ್ರದ ಮಾಜಿ ಶಾಸಕ ಪಿ. ರಾಜೀವ್ ಮಾತನಾಡಿ, ರಾಜ್ಯ ಸರ್ಕಾರ ಕುಡಿಯುವ ನೀರಿಗೆ ಸೆಸ್ ಮೂಲಕ ತೆರಿಗೆ ಹಾಕಿ ಸಾಮಾನ್ಯ ಜನರನ್ನು ಲೂಟಿ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ, ಅತಿವೃಷ್ಟಿಯಿಂದ ಬೆಳೆಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಲು 31 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತರ ಬೆಳೆ ಪರಿಹಾರಕ್ಕೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ವಿಜಯಪುರ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಈರುಳ್ಳಿಯನ್ನು ಯಥೇಚ್ಛವಾಗಿ ಬೆಳೆಯಲಾಗಿದ್ದು, ಮಳೆಯಿಂದ ಈರುಳ್ಳಿ ಬೆಳೆ ಹಾಳಾಗಿದೆ. ಆದರೂ ರಾಜ್ಯ ಸರ್ಕಾರ ಈವರೆವಿಗೆ ಬೆಳೆಗಾರರಿಗೆ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಎಂಎಸ್​ಪಿ ಘೊಷಣೆ ಮಾಡಿದೆ. ಆದರೆ ಕೈ ಸರ್ಕಾರ ಇನ್ನೂ ಖರೀದಿ ಕೇಂದ್ರಗಳನ್ನೇ ತೆರದಿಲ್ಲ. ಹೀಗೆ ರೈತರ ಬದುಕು ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್​ನಾಗಪ್ಪ, ಮಂಜುನಾಥ್ ನೆಲಹೊನ್ನೆ, ತಾಲೂಕಾಧ್ಯಕ್ಷ ನಾಗರಾಜ್ ಅರಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೆಬಾಳು ಮಾತನಾಡಿದರು.

ಬಿಜೆಪಿ ಮುಖಂಡರಾದ ಜೆ.ಕೆ. ಸುರೇಶ್, ಮಾರುತಿನಾಯ್್ಕ ಶಿವಪ್ರಕಾಶ್, ಬೀರಪ್ಪ, ರಂಗನಾಥ್, ಮಂಜುನಾಥ್ ಕೊನಾಯಕನಹಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net