

ಮಂಡ್ಯ: ಜಿಲ್ಲೆಯ ಅಭಿವೃದ್ದಿಗೆ ಮಾಜಿ ಸಚಿವ ಎಸ.ಡಿ.ಜಯರಾಂ ಕೊಡುಗೆ ಅಪಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಹೇಳಿದರು.
ನಗರದ ಹೊಸಹಳ್ಳಿ ವೃತ್ತದಲ್ಲಿರುವ ಎಸ್.ಡಿ.ಜಯರಾಂ ಆಟೋ ನಿಲ್ದಾಣದಲ್ಲಿ ಮಾಜಿ ಸಚಿವ ಎಸ್.ಡಿ.ಜಯರಾಂ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಆಟೋ ಚಾಲಕರಿಗೆ ಸಮವಸ್ತ್ರ ಮತ್ತು ಸಿಹಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್.ಡಿ.ಜಯರಾಂ ಅವರ ಅಧಿಕಾರಾವಧಿಯಲ್ಲಿ ಶಿಕ್ಷಣ, ಗ್ರಾಮೀಣಾಭಿವೃದ್ದಿ, ಶಾಲಾ-ಕಾಲೇಜು, ರಸ್ತೆಗಳ ಅಭಿವೃದ್ದಿ ಸಾಗರೋಪಾದಿಯಲ್ಲಿ ಸಾಗಿದವು ಎಂದು ಹೇಳಿದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಮಂಗಲ ಎಂ.ಲಂಕೇಶ್, ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್, ಕರವೇ ಮಾಜಿ ಅಧ್ಯಕ್ಷ ಕೆ.ಟಿ.ಶಂಕರೇಗೌಡ, ಕಸಾಪ ನಗರ ಘಟಕ ಅಧ್ಯಕ್ಷೆ ಸಿ.ಜೆ.ಸುಜಾತಾಕೃಷ್ಣ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆಂಪರಾಜು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿವೇಕ್, ಆಟೋ ಚಾಲಕರಾದ ನಿಂಗಣ್ಣ, ಗಂಗ, ಸುರೇಶ್, ರಾಜೇಶ್ ಹಾಜರಿದ್ದರು.