ಲಿಂಗಸುಗೂರು ಆಸ್ಪತ್ರೆಗೆ ಮಾಜಿ ಸಚಿವ ಭೇಟಿ

lng byapura
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಪೂರ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯವೈದ್ಯಾಧಿಕಾರಿ ಡಾ.ರುದ್ರಗೌಡ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ್, ಸೋಮಶೇಖರ ಐದನಾಳ ಇದ್ದರು.
Published on

ಲಿಂಗಸುಗೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಪುರ ಭಾನುವಾರ ಭೇಟಿ ನೀಡಿ, ಒಳರೋಗಿಗಳ ಘಟಕ, ಡಯಾಲಿಸಸ್, ಹೆರಿಗೆ ವಿಭಾಗ ಸೇರಿದಂತೆ ವಿವಿಧ ವಾರ್ಡ್‌ಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಕೊರತೆ ಇಲ್ಲದಂತೆ ನೋಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದ ಅವರು, ಹೆಚ್ಚಿನ ಔಷಧಗಳ ಪೂರೈಕೆಗೆ ಮೇಲಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಸೋಮಶೇಖರ ಐದನಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net