

ಗಂಗಾವತಿ: ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿ ಮರೆತಿದ್ದು, ಬರಗಾಲ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪರಣ್ಣಮುನವಳ್ಳಿ ದೂರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಸರ್ಕಾರದ ವೈಲ್ಯದ ವಿರುದ್ಧ ಧ್ವನಿ ಎತ್ತಲು ಭಾನುವಾರ ಆಯೋಜಿಸಿದ್ದ ಪಕ್ಷದ ವಿವಿಧ ಘಟಕಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮಳೆ ಅಭಾವದಿಂದ ಕೃಷಿ ಚಟುವಟಿಕೆ ಹಿನ್ನಡೆಯಾಗಿದ್ದು, ಬರಗಾಲ ಆವರಿಸಿದೆ. ಪರ್ಯಾಯ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ನಿರ್ಲಕ್ಷೃದಿಂದ ವರ್ತಿಸುತ್ತಿದ್ದು, ರೈತರ ಹಿತಾಸಕ್ತಿಗಿಂತ ಉಚಿತ ಯೋಜನೆಗಳ ಅನುಷ್ಟಾನದಲ್ಲಿ ಮಗ್ನವಾಗಿದೆ. ರೈತರ ಪಂಪಸೆಟ್‌ಗಳಿಗೆ ನಿರಂತರ ವಿದ್ಯುತ್ ಕಲ್ಪಿಸದೇ ಅನಿಯಮಿತ ಲೋಡ್ ಶೆಡ್ಡಿಂಗ್‌ಗೆ ಮುಂದಾಗಿದೆ ಎಂದು ಆರೋಪಿಸಿದರು.
ರೈತ ಕುಟುಂಬದ ಮಕ್ಕಳಿಗೆ ರೂಪಿಸಿದ್ದ ರೈತ ವಿದ್ಯಾನಿಧಿ ಯೋಜನೆ ರದ್ದುಪಡಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜಿಲ್ಲೆಗೊಂದು ಗೋಶಾಲೆ ಯೋಜನೆ ಕೈಬಿಟ್ಟಿದೆ. ರೈತ ಪರವಾದ ಯೋಜನೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೆ.8 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಮಟ್ಕಾ, ಇಸ್ಪೀಟ್ ಜೂಜಾಟ ಸೇರಿ ಅನೈತಿಕ ಚಟುವಟಿಕೆ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಗಂಭೀರ ಪರಿಗಣಿಸುತ್ತಿಲ್ಲ. ಹಾಲಿ ಶಾಸಕ ಸಭೆಗೆ ಸೀಮಿತರಾಗಿದ್ದು, ಆಡಳಿತ ವೈಲ್ಯಕ್ಕೆ ಕಾರಣ ಎಂದರು.
ನಯೋಪ್ರಾ ಮಾಜಿ ಅಧ್ಯಕ್ಷ ಎಸ್.ರಾಘವೇಂದ್ರ ಶ್ರೇಷ್ಟಿ, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಸದಸ್ಯರಾದ ಉಮೇಶ ಸಿಂಗನಾಳ್, ನೀಲಕಂಠಪ್ಪ ಕಟ್ಟಿಮನಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಂಕೇಶ ಗುಳದಾಳ್, ವಕ್ತಾರ ಡಬ್ಲುೃ.ವೀರಭದ್ರಪ್ಪ ನಾಯಕ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ ಅಮರಜ್ಯೋತಿ, ವಿವಿಧ ಘಟಕಗಳ ಪದಾಧಿಕಾರಿಗಳಾದ ಕಾಶೀನಾಥ ಚಿತ್ರಗಾರ, ವೆಂಕಟೇಶ ಜಂತಕಲ್, ಆರ್.ದೇವಾನಂದ, ಜಿ.ಶ್ರೀಧರ್ ಇತರರಿದ್ದರು.