ಅಪ್ಪಣ್ಣ ನವರದು ಬಸವಣ್ಣನವರಷ್ಟೇ ಮೇರು ವ್ಯಕ್ತಿತ್ವ

APPANNA
ಕುಷ್ಟಗಿಯ ಮಲ್ಲಿಕಾರ್ಜುನ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಮಾಜಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಪುರ, ಕೆ.ಶರಣಪ್ಪ, ಸಮುದಾಯದ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಾಳ ಇತರರು ಇದ್ದರು.
Published on

ಕುಷ್ಟಗಿ: ಹಡಪದ ಅಪ್ಪಣ್ಣನವರು ಬಸವಣ್ಣನವರಷ್ಟೇ ಮೇರು ವ್ಯಕ್ತಿತ್ವ ಹೊಂದಿ ವಚನ ಸಾಹಿತ್ಯ ಶ್ರೀಮಂತಗೊಳಿಸಿದ್ದಾರೆ ಎಂದು ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.
ಪಟ್ಟಣದ ಮಲ್ಲಿಕಾರ್ಜುನ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲ ಸಮುದಾಯಗಳಲ್ಲೂ ಪರಸ್ಪರ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಅವುಗಳನ್ನು ಬದಿಗಿಟ್ಟು ಸಂಘಟಿತರಾಗಿ ಮುಖ್ಯ ವಾಹಿನಿಗೆ ಬರುವ ಪ್ರಯತ್ನ ಮಾಡಬೇಕಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಾರ್ಯವನ್ನು ಪಾಲಕರು ಮಾಡಬೇಕಿದೆ ಎಂದರು.
ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಜಾತಿ, ವರ್ಣ, ವರ್ಗ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಬಸವಣ್ಣನವರ ಆಪ್ತ ಅಪ್ಪಣ್ಣನವರ ಪಾತ್ರವೂ ಹಿರಿದುದಾಗಿದೆ. ಸಮುದಾಯದ ಅಭಿವೃದ್ಧಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಮಾಜಿ ಶಾಸಕ ಕೆ.ಶರಣಪ್ಪ, ಪ್ರಮುಖರಾದ ರವಿಕುಮಾರ ಹಿರೇಮಠ ಇತರರು ಮಾತನಾಡಿದರು. ಶಿಕ್ಷಕ ನಟರಾಜ ಸೋನಾರ ವಿಶೇಷ ಉಪನ್ಯಾಸ ನೀಡಿದರು. ಪುರಸಭೆ ಸದಸ್ಯರಾದ ಜಿ.ಕೆ.ಹಿರೇಮಠ, ಬಸವರಾಜ ಬುಡಕುಂಟಿ, ಪ್ರಮುಖರಾದ ಎಚ್. ಶಿವಪುತ್ರಪ್ಪ, ದೊಡ್ಡಪ್ಪ ಹೊಸೂರು, ರುದ್ರಪ್ಪ ಹಡಪದ, ವೀರಭದ್ರಪ್ಪ ಹಡಪದ, ಶಿವಪ್ಪ ಇಟ್ಟಂಗಿ, ನೀಲಕಂಠಬಾಬು ನಿಲೋಗಲ್, ಚಂದ್ರಪ್ಪ ಹಡಪದ್, ಮಹಾಂತೇಶ ಅಮರಾವತಿ ಇತರರು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಬುತ್ತಿಬಸವೇಶ್ವರ ದೇವಸ್ಥಾನ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಕೋಟ್
ಹಡಪದ ಸಮುದಾಯ ಅಭಿವೃದ್ಧಿ ಹೊಂದದಿರಲು ಒಗ್ಗಟ್ಟಿನ ಕೊರತೆಯೇ ಕಾರಣ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮುದಾಯವನ್ನು ಕೀಳಾಗಿ ಕಾಣುವವರ ವಿರುದ್ಧ ಒಗ್ಗಟ್ಟಿನಿಂದ ಧ್ವನಿ ಎತ್ತುವ ಕಾರ್ಯವಾಗಬೇಕಿದೆ.
ಮಂಜುನಾಥ ಹಂದ್ರಾಳ
ಸಮುದಾಯದ ಜಿಲ್ಲಾಧ್ಯಕ್ಷ, ಕೊಪ್ಪಳ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net