

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್ (68) ಸೋಮವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನರಾದರು.
ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಲವೇ ಕ್ಷಣಗಳಲ್ಲೇ ಕುಸಿದುಬಿದ್ದ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.
ಆಸ್ಪತ್ರೆಗೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. 2009ರಲ್ಲಿ ಗಾಜನೂರು ಕ್ಷೇತ್ರದಿಂದ ಜಿಪಂ ಸದಸ್ಯರಾಗಿದ್ದ ಅವರು 2013-19ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು.