

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಮಾಜಿ ಅಧ್ಯಕ್ಷ, ಸಿದ್ಧಾರ್ಥನಗರದ ನಿವಾಸಿ ಪಿ. ಗೋವಿಂದರಾಜು (75) ಬುಧವಾರ ನಿಧನರಾದರು.
ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಬನ್ನೂರು ರಸ್ತೆಯ ರಂಗಚಾರಿಹುಂಡಿಯ ತೋಟದಲ್ಲಿ ಗುರುವಾರ ಮಧ್ಯಾಹ್ನ 3ಕ್ಕೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪಿ. ಗೋವಿಂದರಾಜು ಮೂಲತಃ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಾಂಬಳ್ಳಿಯವರು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಬೆಂಬಲಿಗರಾಗಿದ್ದ ಅವರು ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಹುಣಸೂರು, ಕೃಷ್ಣರಾಜ ವಿಧಾನಸಭಾ ಕ್ಷೇತ್ರ, ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.