ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

HD Devegowda
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟ ಸಮಸ್ಯೆ ಕಾಣಿಕೊಂಡ ಹಿನ್ನೆಲೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಗೌಡರ ಆರೋಗ್ಯ ನಿಗಾವಹಿಸಿದ್ದಾರೆ. ಸದ್ಯ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ.

ಮಣಿಪಾಲ್‌ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net