ಎಚ್.ಡಿ.ದೇವೇಗೌಡ ಆಗಮನ ನಾಳೆ

Venkatrao Nadagouda1
Published on

ಸಿಂಧನೂರು: ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಲಕ್ಷನರ್ಮದಾ ಲಿಂಗಸಹಿತ ಆತ್ಮಲಿಂಗ ದಿವ್ಯ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ನಡೆಯಲಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆಗಮಿಸಲಿದ್ದಾರೆ ಎಂದು ಶಾಸಕ ವೆಂಕಟರಾವ ನಾಡಗೌಡ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಒಂದು ಕೋಟಿ ರೂ. ವೆಚ್ಚದಲ್ಲಿ ಲಕ್ಷಲಿಂಗ ಪ್ರತಿಷ್ಠಾಪಿಸಲಾಗಿದೆ. ಬೆಲ್ಜಿಯಂನಿಂದ ಆತ್ಮಲಿಂಗ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಅತಿದೊಡ್ಡ ಶಿವಲಿಂಗ ಇದಾಗಿದೆ. ಮುಂದಿನ ದಿನಗಳಲ್ಲಿ ವೀಕ್ಷಕರ ಸಂಖ್ಯೆ ದೊಡ್ಡದಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net