ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ ನಿಧನ

10 T.K.CHINNASWAMY-4
Published on

ಕೆ.ಆರ್.ನಗರ: ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ(94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಮೃತರಿಗೆ ಮೂವರು ಪುತ್ರರಿದ್ದಾರೆ. ಇತ್ತೀಚಿಗೆ ಮನೆಯಲ್ಲಿ ಕಾಲುಜಾರಿ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಟಿ.ಕೆ.ಚಿನ್ನಸ್ವಾಮಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಮುಂಬಡ್ತಿ ಪಡೆದು ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ 1988ರಲ್ಲಿ ವಿಧಾನ ಪರಿಷತ್‌ಗೆ ನಡೆದ ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಪ್ರಸ್ತುತ ಕೆ.ಆರ್.ನಗರ ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಸಂಸ್ಥಾಪಕ ಹಾಗೂ ಎಡತೊರೆ ಬಲಿಜ (ಬಣಜಿಗ) ಸಂಘದ ಮಹಾ ಪೋಷಕರಾಗಿ ಸೇವೆ ಆರಂಭಿಸಿದ ಇವರು, ಪಟ್ಟಣದ ಮಹಾತ್ಮ ಗಾಂಧಿ ಉದ್ಯಾನವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.

ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಶಾಸಕ ಡಿ.ರವಿಶಂಕರ್, ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಮಾಜಿ ಸದಸ್ಯರಾದ ನಾಗರತ್ನಮ್ಮ, ಕೆ.ಬಿ.ಸುಬ್ರಹ್ಮಣ್ಯ, ಜೆಡಿಎಸ್ ತಾಲೂಕು ವಕ್ತಾರ ಕೆ.ಎಲ್.ರಮೇಶ್, ಪತ್ರಕರ್ತ ಭೇರ್ಯಮಹೇಶ್ ಅಂತಿಮ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net