ಅ.17ರಂದು ನಗರದಲ್ಲಿ ವಿಶೇಷ ಪೂಜೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾಹಿತಿ

Former Zilla Panchayat President press conference Mandya
Published on

ಮಂಡ್ಯ: ಕಾವೇರಿ ಮಾತೆಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅ.17ರಂದು ಪವಿತ್ರ ತೀರ್ಥೋದ್ಭವ ನಡೆಯುವ ಹಿನ್ನೆಲೆಯಲ್ಲಿ ನಗರದ ಕಾವೇರಿ ಉದ್ಯಾನದಲ್ಲಿನ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆದ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಸಂಜೆ 4ಗಂಟೆಗೆ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ನಗರಸಭಾ ಅಧ್ಯಕ್ಷ ಎಂ.ವಿ.ಪ್ರಕಾಶ್, ಉಪಾಧ್ಯಕ್ಷ ಅರುಣ್‌ಕುಮಾರ್, ಮುಡಾ ಅಧ್ಯಕ್ಷ ನಹೀಂ, ಟ್ರಸ್ಟ್‌ನ ಪ್ರಧಾನ ಪೋಷಕ ಎಚ್.ಎನ್.ಯೋಗೇಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಡಿಸಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನ ದಾಸೋಹ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಟ್ರಸ್ಟ್‌ನ ಜಗದೀಶ್, ಚಂದ್ರಶೇಖರ್, ಟಿ.ಡಿ.ನಾಗರಾಜು, ದೇವೇಗೌಡ, ಕುಮಾರ್‌ಗೌಡ, ಅರ್ಜುನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net